ಬೆಂಗಳೂರು : ಕಾಂಗ್ರೆಸ್ ಘೋಷಣೆ ಮಾಡಿದಂತೆ ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ, ಡಿಕೆಶಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಟಾಂಗ್ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಅಶೋಕ್ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡುತ್ತಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು. ಕಾಂಗ್ರೆಸ್ ಘೋಷಣೆ ಮಾಡಿದಂತೆ ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ, ಡಿಕೆಶಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಸೈಲೆಂಟ್, ಡಿಸಿಎಂ ಡಿಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ ಮಾಜಿ ಸಚಿವ ಅಶೋಕ್ ವಾಗ್ಧಾಳಿ ನಡೆಸಿದರು.‘ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಸೈಲೆಂಟ್, ಡಿಸಿಎಂ ಡಿಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ. ಡಿಕೆಶಿ ಸಭೆಯಲ್ಲಿ ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಗಿಂತ ಮುಂಚೆ ಡಿಸಿಎಂ ಡಿಕೆಶಿಯೇ ಎಲ್ಲದಕ್ಕೂ ಮಾತನಾಡುತ್ತಾರೆ’ ಎಂದು ವಾಗ್ಧಾಳಿ ನಡೆಸಿದರು. ಸುಳ್ಳು ಭರವಸೆ ನೀಡಿ ಕಾಂಗ್ರೆಸ್ ಸರ್ಕಾರ ಜನರನ್ನು ಮೋಡಿ ಮಾಡಿದೆ, ರಾಹುಲ್, ಪ್ರಿಯಾಂಕಾ ಬಂದು ಗ್ಯಾರೆಂಟಿ ಘೋಷಣೆ ಮಾಡಿದರು. ಗ್ಯಾರೆಂಟಿ ಕಾರ್ಡ್ ಗೆ ಸಿದ್ದರಾಮಯ್ಯ. ಡಿಕೆಶಿ ಸಹಿ ಮಾಡಿದರು. ದಾರಿಯಲ್ಲಿ ಹೋಗುವರಿಗೂ ಗ್ಯಾರೆಂಟಿ ಕಾರ್ಡ್ ನೀಡಿದ್ದರು. ಆದರೆ ಈಗ ದಾರಿಯಲ್ಲಿ ಹೋಗುವವರಿಗೆ ಗ್ಯಾರೆಂಟಿ ಕಾರ್ಡ್ ಕೊಡೋಕೆ ಆಗುತ್ತಾ ಎಂದು ಡಿಕೆಶಿ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.