ಬೆಂಗಳೂರು : ಇದೀಗ ರಾಜ್ಯ ಅಷ್ಟೇ ಅಲ್ಲದೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಹನ್ನೆರಡು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ವಿಚಾರದಿಂದ ಜೆಡಿಎಸ್‌ನ 12 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂಬ ವಿಚಾರವೆಲ್ಲಾ ಸುಳ್ಳು. ಊಹಾ ಪೋಹಗಳನ್ನು ಹರಡಲಾಗುತ್ತಿದೆ. ಜೆಡಿಎಸ್‌ನವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿ ಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪ್ರಜ್ವಲ್ ಅವರ ವಿಚಾರದಿಂದ ಜೆಡಿಎಸ್‌ ಪಕ್ಷದ 12 ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಅದೆಲ್ಲವೂ ಸುಳ್ಳು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಎಂತಹವ ರಾದರೂ ಈ ವಿಚಾ ರದಲ್ಲಿ ಹತಾಶರಾಗಿರುತ್ತಾರೆ.  ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಅವರ ಪಕ್ಷದಲ್ಲಿ ಹಾಗೂ ಕುಟುಂಬದ ಲ್ಲಿನ ಆಂತರಿಕ ಸಮಸ್ಯೆಗಳು ಎಲ್ಲರಿಗೂ ಗೊತ್ತಿದೆ ಎಂದರು. ಇಂಗ್ಲೆಂಡ್‌ನಲ್ಲಿ ರೇವಣ್ಣ ಅವರದ್ದು ಇಂತಹ ಪ್ರಕರಣ ನಡೆದಿತ್ತು ಎಂಬ ಶಿವ ರಾಮೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ಆಗ ಹೋಟೆಲಿಂದ ಅವರನ್ನು ಖಾಲಿ ಮಾಡಿಸಿದ್ದರು ಎಂದು ಕೇಳಿದ್ದೇನೆ ಎಂದು ತಿಳಿಸಿದರು.

Share.
Exit mobile version