ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ HD ದೇವೇಗೌಡರು ಅಂಬುಲೆನ್ಸ್ ನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಅವರು ಬದುಕಿರುತ್ತಾರೆ ಇಲ್ಲವೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಎಚ್ ಡಿ ದೇವೇಗೌಡ ಆಂಬುಲೆನ್ಸ್ ನಲ್ಲಿ ಪ್ರಚಾರಕ್ಕೆ ಬರುತ್ತಾರೆ ಎಂಬ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು HD ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಬದುಕಿರುತ್ತಾರೋ ಇಲ್ಲವೋ ಗೊತ್ತಿಲ್ಲ.ಎಚ್‌ಡಿ ದೇವೇಗೌಡರು ಬೆವರು ಸುರಿಸಿ ಪಕ್ಷ ಕಟ್ಟಿದ್ದಾರೆ. ಈ ವಯಸ್ಸಿನಲ್ಲೂ ಪಕ್ಷಕ್ಕಾಗಿ ದೇವೇಗೌಡರು ದುಡಿಯುತ್ತಿದ್ದಾರೆ. ಎಚ್ ಡಿ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ.ಇದಕ್ಕೆ ಕ್ಷೇತ್ರದ ಜನರು ಮತಗಳ ಮೂಲಕ ಉತ್ತರ ಕೊಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಗೆಲ್ಲಲು ಆಗಲಿಲ್ಲ ಅಲ್ಲವೇ. ರಾಜಕೀಯದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದು ನೈಜ ಸೋಲುಗಳಲ್ಲ. ಕಾಂಗ್ರೆಸ್ ಪಕ್ಷದ ಕುತಂತ್ರದಿಂದ ನಿಖಿಲ್ ಕುಮಾರಸ್ವಾಮಿ ಸೋತಿದ್ದು.ಈ ಬಾರಿ ಜನರೇ ನಿಖಿಲ್ ನನ್ನು ಗೆಲ್ಲಿಸುತ್ತಾರೆ. ಎಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.