ಬೆಂಗಳೂರು : ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ನಿಮ್ಮ ಕಷ್ಟ, ಸಮಸ್ಯೆ ಆಲಿಸಲು ಕನಕಪುರಕ್ಕೆ ಬರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ.
ಹೌದು ಪ್ರತಿ ತಿಂಗಳು 2 ಮತ್ತು 3ನೇ ಶನಿವಾರ ಕನಕಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲಿದ್ದು ಕ್ಷೇತ್ರದ ಜನರ ಸಮಸ್ಯೆ ಆಲಿಸಲಿದ್ದಾರೆ. ಕ್ಷೇತ್ರದ ಜನರು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸುತ್ತೇನೆ. ಕನಕಪುರಕ್ಕೆ ಬಂದು ಕ್ಷೇತ್ರದ ಜನರ ಅಹವಾಲನ್ನು ಸ್ವೀಕರಿಸುವೆ ಎಂದು ಕನಕಪುರ ಕ್ಷೇತ್ರದ ಜನರಿಗೆ ಡಿ.ಕೆ.ಶಿವಕುಮಾರ್ ಸಂದೇಶ ನೀಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ. ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಸುದ್ದಿಗರರೊಂದಿಗೆ ಮಾತನಾಡುತ್ತಿದ್ದಾಗ ತಿಳಿಸಿದರು.