ಬೆಂಗಳೂರು: ರಾಜ್ಯದಲ್ಲಿ ಮೂವರು ಡಿಸಿಎಂ ಆಯ್ಕೆ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲೇ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ನಡೆದಂತ ಕಾಂಗ್ರೆಸ್ ಸಭೆಯಲ್ಲಿ ಡಿಸಿಎಂ ವಿಚಾರವಾಗಿ ಸಚಿವರು ಯಾಕೆ ಬಹಿರಂಗವಾಗಿ ಚರ್ಚೆ ಮಾಡುತ್ತಿದ್ದೀರಿ.? ಬಹಿರಂಗವಾಗಿ ಚರ್ಚೆ ಮಾಡಿದ್ರೇ ಆಗುವ ಲಾಭಗಳೇನು ಅಂತ ಪ್ರಶ್ನಿಸಿದರು.
ಇನ್ಮುಂದೆ ಡಿಸಿಎಂ ವಿಚಾರದಲ್ಲಿ ಬಹಿರಂಗವಾಗಿ ಚರ್ಚೆ ಮಾಡಬೇಡಿ. ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ. ತಪ್ಪು ಸಂದೇಶ ಹೋಗಲಿದೆ ಎಂಬುದಾಗಿ ಸಭೆಯಲ್ಲಿ ಖಡಕ್ ಎಚ್ಚರಿಕೆಯನ್ನು ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ನೀಡಿದ್ದಾರೆ.
ಅಂದಹಾಗೇ ಕರ್ನಾಟಕದಲ್ಲಿ ಮೂವರು ಡಿಸಿಎಂ ನೇಮಕದ ಬಗ್ಗೆ ಬಹಿರಂಗವಾಗಿ ಚರ್ಚೆ ಆರಂಭಗೊಂಡಿತ್ತು. ಅನೇಕ ಕಡೆಯಲ್ಲಿ ಸಚಿವರು ಪರ ವಿರೋಧವಾಗಿಯೂ ಹೇಳಿಕೆ ನೀಡಿದ್ದರು. ಅಲ್ಲದೇ ದಲಿತ ಡಿಸಿಎಂ ಸೇರಿದಂತೆ ವಿವಿಧ ವಿಚಾರಗಳ ಚರ್ಚೆಗೂ ಕಾರಣವಾಗಿದ್ದರು. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ಖಡಕ್ ವಾರ್ನಿಂಗ್ ಮಾಡಿದೆ.
‘ಕುವೆಂಪು ವಿವಿ ವಿದ್ಯಾರ್ಥಿ’ಗಳ ಗಮನಕ್ಕೆ: ‘ಸ್ನಾತಕೋತ್ತರ ಪದವಿ’ ಪರೀಕ್ಷಾ ಫಲಿತಾಂಶ ಪ್ರಕಟ
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ