Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

Heat wave: ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಅಪ್ಪಿತಪ್ಪಿಯೂ ಈ 10 ಎಡವಟ್ಟುಗಳನ್ನು ಮಾಡಬೇಡಿ!

BREAKING : ಸಾಲ ವಾಪಸ್ ಕೇಳಿದ್ದಕ್ಕೆ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ : MLC ಹೆಚ್ ವಿಶ್ವನಾಥ್ ವಿರುದ್ಧ ‘FIR’ ದಾಖಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಿಸ್‌ ಮಾಡ ಬೇಡಿ: ಈ ಕಾರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ
LIFE STYLE

ಮಿಸ್‌ ಮಾಡ ಬೇಡಿ: ಈ ಕಾರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ

By ವಸಂತ ಬಿ ಈಶ್ವರಗೆರೆ
Drink a glass of hot water before going to bed, do you know how many benefits it has?

ಬಳ್ಳಾರಿ : ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಇದರಿಂದ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೇಸಿಗೆ ಪ್ರಾರಂಭದ ಹಿನ್ನಲೆಯಲ್ಲಿ ಜಾತ್ರೆ ಹಾಗೂ ಉತ್ಸವಗಳಲ್ಲಿ ಕಲುಷಿತ ನೀರಿನಿಂದ, ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಟೈಫಾಯಿಡ್, ಕಾಲಾರ, ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುತ್ತವೆ.

ಅದರಲ್ಲೂ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಓಆರ್‌ಎಸ್ ಜೀವಜಲವನ್ನು ತಯಾರಿಸುವಾಗ 1 ಲೀ. ನೀರಿಗೆ ಆರೋಗ್ಯ ಇಲಾಖೆಯಿಂದ ಕೊಡುವ ಪೊಟ್ಟಣದಲ್ಲಿರುವ ಪುಡಿಯನ್ನು ಸಂಪೂರ್ಣವಾಗಿ ಹಾಕಿ ಮಿಶ್ರಣ ಮಾಡಿದ ದ್ರಾವಣವನ್ನು ವಾಂತಿ ಬೇಧಿ ಭಾದಿತರಿಗೆ ಕುಡಿಯಲು ಕೊಡಬೇಕು ಹಾಗೂ ಇದನ್ನು 24 ಗಂಟೆಯೊಳಗೆ ಸಂಪೂರ್ಣವಾಗಿ ಬಳಸಲು ಆದ್ಯತೆ ನೀಡಬೇಕು ಎಂದಿದ್ದಾರೆ.

ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇಧಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ (ಇವುಗಳಲ್ಲಿ ವಾಂತಿ-ಬೇಧಿ, ಕಾಲರಾ, ಹೆಪಟೈಟಸ್-ಎ ಮತ್ತು ಕಲುಷಿತ ಆಹಾರ ಸೇವನೆಯಿಂದ ಸಹ ರೋಗ ಬರಬಹುದು) ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಸಾರ್ವಜನಿಕರು ಶುದ್ದ ನೀರಿನ ಘಟಕದ ನೀರನ್ನು ಕುಡಿಯಬೇಕು ಎಂದಿದ್ದಾರೆ.

ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು. ತಂಗಳು ಆಹಾರ ಸೇವಿಸದೇ ಬೆಳಗಿನ ಆಹಾರ ಬೆಳಿಗ್ಗೆ ಹಾಗೂ ರಾತ್ರಿ ಆಹಾರ ರಾತ್ರಿ ಮಾತ್ರ ಬಳಸಬೇಕು. ಮುಖ್ಯವಾಗಿ ಬೇಸಿಗೆಯಲ್ಲಿ ಹೆಚ್ಚು ಜಾಗೃತಿ ವಹಿಸಬೇಕು.

ತಯಾರಿಸಿದ ಆಹಾರದÀ ಮೇಲೆ ನೊಣ ಕೂಡದಂತೆ ಮುಚ್ಚಳ, ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಮುಚ್ಚಬೇಕು. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ, ನೀರಿನಲ್ಲಿ ಕೈ ಅದ್ದದಂತೆ ಮುಂಜಾಗೃತೆ ವಹಿಸಬೇಕು ಎಂದು ಹೇಳಿದ್ದಾರೆ.

ರಸ್ತೆ ಬದಿ ತೆರೆದಿಟ್ಟ ಅಥವಾ ಕತ್ತರಿಸಿದ ಹಣ್ಣುಗಳನ್ನು ತಿನ್ನಬಾರದು. ನೊಣಗಳು ಆಹಾರದ ಮೇಲೆ ಕುಳಿತುಕೊಳ್ಳುವ ಸಾಧ್ಯತೆಯಿದ್ದು, ಧೂಳು ಸಹ ಆಹಾರದ ಮೇಲೆ ಮೆತ್ತಿಕೊಂಡಿರುತ್ತದೆ. ವಾಂತಿ-ಬೇಧಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೇ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬು ಪಾನಕ ಹಾಗೂ ಸಾಧ್ಯವಾದರೆ ಎಳೆನೀರು ಕೊಡುವುದು ಉತ್ತಮ. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು.

ಮೇಲ್ಕಂಡ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಸುರಕ್ಷಿತರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Actress Rashmi Leela No More

Share. Facebook Twitter LinkedIn WhatsApp Email

Related Posts

Sex Health Tips: ಪುರುಷರ ಲೈಂಗಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು 9 ಪ್ರಮುಖ ಸಲಹೆಗಳು

2 Mins Read

ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಕರಿಸುವ 5 ದಿನನಿತ್ಯದ ಆಹಾರಗಳಿವು

2 Mins Read

ಎಚ್ಚರ! ಆರೋಗ್ಯಕರ ಎಂದು ಭಾವಿಸುವ ಈ 6 ಭಾರತೀಯ ಆಹಾರಗಳು ನಿಮ್ಮ ದೇಹಕ್ಕೆ ಹಾನಿ ಮಾಡಬಹುದು

2 Mins Read
Recent News

BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

Heat wave: ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಅಪ್ಪಿತಪ್ಪಿಯೂ ಈ 10 ಎಡವಟ್ಟುಗಳನ್ನು ಮಾಡಬೇಡಿ!

BREAKING : ಸಾಲ ವಾಪಸ್ ಕೇಳಿದ್ದಕ್ಕೆ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ : MLC ಹೆಚ್ ವಿಶ್ವನಾಥ್ ವಿರುದ್ಧ ‘FIR’ ದಾಖಲು!

ಮೇ 23 ರಿಂದ ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭೇಟಿ; ರಾಜತಾಂತ್ರಿಕ ವಲಯದಲ್ಲಿ ಭಾರಿ ಕುತೂಹಲ!

State News
KARNATAKA

BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

By ಸುರೇಶ್‌ KARNATAKA 1 Min Read

ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಕೊಲೆ ನಡೆದಿದ್ದು ಕೆ ಹೊನ್ನಲಗೆರೆಯಲ್ಲಿ ಮಾರ್ಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ…

BREAKING : ಸಾಲ ವಾಪಸ್ ಕೇಳಿದ್ದಕ್ಕೆ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ : MLC ಹೆಚ್ ವಿಶ್ವನಾಥ್ ವಿರುದ್ಧ ‘FIR’ ದಾಖಲು!

BIG NEWS : ರಾಜ್ಯಾದ್ಯಂತ ವರುಣಾರ್ಭಟ : ಬೀದರ್ ನಲ್ಲಿ ಮನೆಯ ಮೇಲ್ಚಾವಣಿ ಕುಸಿದು ಮಕ್ಕಳು ಸೇರಿ ಐವರಿಗೆ ಗಾಯ!

ಹನುಮಾನ್ ಮಾಲಾ ಮಂತ್ರ ನಿಮ್ಮ ಸಕಲ ಸಂಕಟಗಳನ್ನು ದೂರ ಮಾಡುತ್ತದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.