ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಕರೆ ನೀಡಲಾಗಿದೆ. ಈ ನಡುವೆಯೇ ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿರುವುದಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
BIGG NEWS:ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್ ಗಾಂಧಿ
ನಗರದಲ್ಲಿ ಮಾತನಾಡಿದ ಅವರು, ಹೋರಾಟವನ್ನ ಶಾಂತಿಯುತವಾಗಿ ಮಾಡಲು ನನ್ನ ಅಭ್ಯಂತರ ಇಲ್ಲ. ಕಾನೂನು ಕೈಗೆತ್ತಿಕೊಂಡರೆ ಮುಂದಕ್ಕೆ ಆಗುವ ಅನಾಹುತಕ್ಕೆ ಅವರೇ ಹೊಣೆಯಾಗುತ್ತಾರೆ. ನಾನು ಟೋಲ್ ಗೇಟ್ ತೆಗೆಯಲು ಬದ್ಧನಾಗಿದ್ದೇನೆ. ಆದರೆ ಕಾನೂನು ಸಮಸ್ಯೆ ಕಾರಣ ಟೋಲ್ ಗೇಟ್ ತೆರವು ಕಷ್ಟವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.ಹೋರಾಟಗಾರರಿಗೆ ನೋಟಿಸ್ ಕೊಟ್ಟ ಬಗ್ಗೆ ಮಾಹಿತಿ ಇರಲಿಲ್ಲ. ನಾನು ಕಮಿಷನರ್ ಗೆ ಹೇಳಿದ್ದೇನೆ, ಹೋರಾಟ ಸಹಜ, ಯಾವುದೇ ನೋಟಿಸ್ ಮಾಡಬೇಡಿ. ಶಾಂತಿಯುತ ಹೋರಾಟಕ್ಕೆ ನನ್ನ ವಿರೋಧ ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ ಕ್ರಮ ಕೈಗೊಳ್ಳುತ್ತದೆ ಎಂದರು.