ಬೆಂಗಳೂರು: ರಾಮನಗರ ಜಿಲ್ಲೆಯನ್ನು ಮರುನಾಮಕರಣಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡದಂತೆ ಸಿಎಂ ಸಿದ್ಧರಾಮಯ್ಯಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ ಮಾಜಿ ಮುಖ್ಯ ಮಂತ್ರಿಯವರಾದ ದಿವಂಗತ ಕೆಂಗಲ್ ಹನುಮಂತಯ್ಯನವರು ಎಂದಿದ್ದಾರೆ.
ಧಾರ್ಮಿಕ ಗುರುಗಳಾದ ಅವಿ ಚುಂಚನಲಲಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಜೀಯವರು ಹಾಗೂ ನಡೆದಾಡುವ ದೇವರೆಂದೇ ಪ್ರಸಿದ್ಧಿಯಾದ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜೀಯವರು ರಾಮನಗರ ಜಿಲ್ಲೆಯವರು ಎಂದು ಹೇಳಿದ್ದಾರೆ.
ಬೆಂಗಳೂರು ನಿರ್ಮಾತೃಗಳಾದ ನಾಡಪ್ರಭು ಕೆಂಪೆಗೌಡರು ಸಹ ಈ ಜಿಲ್ಲೆಗೆ ಸೇಲದವರು. ರಾಮನಗರ ಜಿಲ್ಲೆಯು ರಾಜ್ಯಕ್ಕೆ ಐದುಬಾಲ ಮುಖ್ಯಮಂತ್ರಿ ಪದವಿಯನ್ನು ನೀಡಿದೆಯಲ್ಲದೆ ರಾಮನಗರದಿಂದ ಗೆದ್ದು ಮುಖ್ಯಮಂತ್ರಿಯವರಾಗಿದ್ದ ಹೆಚ್.ಡಿ. ದೇವೇಗೌಡರವರು ಈ ದೇಶದ ಪ್ರಧಾನಿಯಾಗಿದ್ದರು. ರಾಮನಗರ ಕಣ್ವ ಮಹರ್ಷಿಯ ನಾಡು, ರಾಮಾಯಣದಲ್ಲಿನ ಶ್ರೀ ರಾಮಚಂದ್ರರು ರಾಮಲಲಯಲ್ಲಿ ತಂಗಿರುವ ಇತಿಹಾಸವಿದೆ.
ಈಗಾಗಲೇ ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ಧಿಯಾಗಿದೆ. ಇದರ ಜೊತೆಗೆ ರಾಮನಗರದ ಹೆಸರು ಹೇಳುತ್ತಿದಂತೆ ಜಾನಪದ ಲೋಕ, ಚನ್ನಪಟ್ಟಣದ ಗೊಂಬೆಗಳು, ಅರ್ಕಾವತಿ, ಕಾವೇಲಿ, ಶಿಂಷಾ, ಕಣ್ವ ನದಿಗಳು; ಮಂಚನಬೆಲೆ, ಬೈರಮಂಗಲ, ಹಾರೋಬೆಲೆ, ಕಣ್ವ ಮತ್ತು ಇಗ್ಗಲೂರು ಜಲಾಶಯಗಳು; ರಾಮಣಲ, ಕೃಷ್ಣಣಲ, ರೇವಣ್ಣಸಿದ್ದೇಶ್ವರ ಬೆಟ್ಟ, ಯತಿರಾಜಲ, ಸೋಮಲಲ, ಸಿಡಿಲಕಲ್ಲು ಮತ್ತು ಜಲಸಿದ್ಧೇಶ್ವರ ಬೆಟ್ಟ, ಕಬ್ಬಾಳುದುರ್ಗ, ಸಾವನದುರ್ಗ, ಮೇಕೆದಾಟು ಮುಂತಾದವುಗಳು ನೆನಪಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ರಾಮನಗರ ಎಂಬ ಹೆಸರೇ ರಕ್ಷಾಕವಚದಂತಿದೆ.
ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರ ಪ್ರಸ್ತುತ ಬೆಂಗಳೂಲಿನ ಅಡಿಯಲ್ಲಿಯೇ ಇದೆ. ಈಗಾಗಲೇ ಬೆಂಗಳೂರು ದಕ್ಷಿಣ ತಾಲ್ಲೂಕು ಅಸ್ತಿತ್ವದಲ್ಲಿದ್ದು ಬೆಂಗಳೂರು ನಗರ ಜಿಲ್ಲೆಗೆ ಸೇಲರುತ್ತದೆ. ಹೀಗಿರುವಾಗ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿದರೆ ಹೆಚ್ಚು ಗೊಂದಲ ಸೃಷ್ಟಿಯಾಗುತ್ತದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಬೆಂಗಳೂರು ಪೂರ್ವ ಜಿಲ್ಲೆಯೆಂದು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗಳು ಬಂದು ಇನ್ನಷ್ಟು ಗೊಂದಲ ಸೃಷ್ಟಿಯಾಗುವುದಲ್ಲದೆ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಸಂಭವವಿರುತ್ತದೆ.
ಕೇವಲ ಬೆಂಗಳೂರು ಎಂಬ ಹೆಸಲನಿಂದಲೇ ಜಿಲ್ಲೆಯ ಅಭಿವೃದ್ಧಿಯಾಗುವುದಿದ್ದರೆ ರಾಮನಗರವು ಕರ್ನಾಟಕ ಏಕೀಕರಣವಾದಂಬಿನಿಂದ 1988 ರ ವರೆಗೆ ಬೆಂಗಳೂರು ಜಿಲ್ಲೆಯಲ್ಲಿ ಹಾಗೂ 1986 ಲಂದ 2007 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸಲನ ಜಿಲ್ಲೆಯಲ್ಲಿ ಒಳಗೊಂಡಿತೆಂಬುದನ್ನು ಗಮನಿಸಬೇಕಾಗುತ್ತದೆ. ಈ ಮೇಲಿನ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹಾಗೂ 2007 ರಲ್ಲಿ ರಾಮನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿಯನ್ನು ಗಮನಿಸಿದಾಗ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವುದು ಸಮಂಜಸವಲ್ಲ.
ಅಭಿವೃದ್ಧಿಯ ದೃಷ್ಟಿಯಿಂದಲೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರಾಂಡ್ ರಾಮನಗರವನ್ನಾಗಿ ಮಾಡಿ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ. ರಾಮನಗರಕ್ಕೆ ತನ್ನದೆ ಇತಿಹಾಸವಿರುವುದಲಂದ ಜಿಲ್ಲೆಗೆ ಮರುನಾಮಕರಣ ಮಾಡುವುದು ಸರಿಯಾದ ಕ್ರಮವಲ್ಲ.
ಅಲ್ಲದೇ ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದ್ದು ಇಲ್ಲಿ ವಾಸಿಸುತ್ತಿರುವ ನಾಗಲಕಲಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕವಾಗಿದೆ. ರಾಮನಗರ ಜಿಲ್ಲೆಯು ರೈತರ ಜಿಲ್ಲೆಯಾಗಿ ಉಳಿಯಬೇಕ ಹೊರತು ಲಯಲ್ ಎಸ್ಟೇಟ್ ಅಲ್ಟರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿಯ ಬೆಲೆ ಅಧಿಕವಾಗುವುದಕ್ಕಿಂತ ರೈತರು ಬೆಳೆದ ಬೆಳೆಯ ಬೆಲೆಯು ಅಧಿಕವಾಗಬೇಕು. ದಯವಿಟ್ಟು ಸನ್ಮಾನ್ಯ ಮುಖ್ಯಮಂತ್ರಿಯವರು ಈ ಪ್ರಸ್ತಾವನೆಯನ್ನು ತಿರಸ್ಕಲಸಬೇಕಾಗಿ ಮನವಿ ಮಾಡಿದ್ದಾರೆ.
ಶಿವಮೊಗ್ಗ: ಜುಲೈ.13ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut