Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದ 157 ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆ.!

21/04/2026 5:47 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ಇಂದಿನಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

21/04/2026 5:36 AM

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!

21/04/2026 5:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಹಕಾರಿ ಕ್ಷೇತ್ರದ ಪವಿತ್ರತೆ ಹಾಳು ಮಾಡಬೇಡಿ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
KARNATAKA

ಸಹಕಾರಿ ಕ್ಷೇತ್ರದ ಪವಿತ್ರತೆ ಹಾಳು ಮಾಡಬೇಡಿ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

By kannadanewsnow0921/01/2026 5:13 PM

ಶಿವಮೊಗ್ಗ : ಸಹಕಾರಿ ಕ್ಷೇತ್ರ ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದ್ದು, ಅದರ ಪಾವಿತ್ರ್ಯತೆ ಹಾಳು ಮಾಡಬಾರದು. ಸಹಕಾರಿ ಸಂಸ್ಥೆಯಲ್ಲಿದ್ದು ರೈತರಿಗೆ, ಜನಸಾಮಾನ್ಯರಿಗೆ ಉಪಕಾರ ಮಾಡಬೇಕೆ ವಿನಃ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪವಿತ್ರ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಹಣ ಮಾಡುವ ಉದ್ದೇಶವಿದ್ದರೇ ಸಹಕಾರ ಸಂಘಕ್ಕೆ ಬರಬೇಡಿ. ಸೇವೆ ಮಾಡುವ ಮನಸ್ಸಿದ್ದವರಿಗೆ ಸಹಕಾರಿ ಕ್ಷೇತ್ರ ಅತ್ಯಂತ ಪೂರಕವಾಗಿರುತ್ತದೆ. ವೈಯಕ್ತಿಕ ಪ್ರತಿಷ್ಟೆಯನ್ನು ಬದಿಗಿಟ್ಟು ಕೆಲಸ ಮಾಡಿದಾಗ ಮಾತ್ರ ಸಹಕಾರ ಕ್ಷೇತ್ರದ ಮೂಲಕ ಸಮೂಹಕ್ಕೆ ಒಂದಷ್ಟು ಕೊಡುಗೆಯನ್ನು ನೀಡಲು ಸಾಧ್ಯವಿದೆ. ತಾಲ್ಲೂಕಿನಲ್ಲಿ ಕಲ್ಮನೆ ಹೊರತುಪಡಿಸಿ ಉಳಿದ ಸಹಕಾರ ಸಂಘಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಕಲ್ಮನೆ ಸೊಸೈಟಿಯನ್ನು ಸಹ ಸರಿದಾರಿಗೆ ತರುವ ಕೆಲಸ ಮಾಡಲಾಗುತ್ತಿದೆ ಎಂದರು.

ರೈತರ ಆಧಾರ ಸ್ತಂಭದಂತಿರುವ ಸಹಕಾರಿ ಕ್ಷೇತ್ರಗಳು ಗ್ರಾಮೀಣ ಭಾಗದ ಆರ್ಥಿಕ ಚೈತನ್ಯವನ್ನು ಕಾಪಾಡಿಕೊಂಡು ಬರುತ್ತಿದೆ. ಸಾಲ ವಸೂಲಾತಿ, ಸೌಲಭ್ಯ ಕಲ್ಪಿಸಲು ಇದು ಹೆಚ್ಚು ಪೂರಕವಾಗಿದೆ. ಹಣಕಾಸು ದುರುಪಯೋಗವಾಗದಂತೆ, ಸದಸ್ಯರ ಹಿತ ಕಾಯುವುದು ಹೇಗೆ ಎನ್ನುವುದನ್ನು ಇಂತಹ ಮಾಹಿತಿ ಕರ‍್ಯಾಗಾರಗಳ ಮೂಲಕ ಅರಿತುಕೊಳ್ಳಲು ಸಾಧ್ಯವಿದೆ. ನಮಗೂ ವಿಧಾನಸಭಾಧ್ಯಕ್ಷರು ಸದನದಲ್ಲಿ ನಡೆದುಕೊಳ್ಳಬೇಕಾದ ವಿಧಾನ ಕುರಿತು ತರಬೇತಿ ನೀಡುತ್ತಾರೆ. ಪ್ರತಿಯೊಂದು ಕ್ಷೇತ್ರದಲ್ಲಿ ಇರುವವರಿಗೂ ತರಬೇತಿ ಅತ್ಯಾಗತ್ಯ. ಈ ಆರ್ಥಿಕ ವರ್ಷದಿಂದ ತಾಲ್ಲೂಕಿನಲ್ಲಿ ಉತ್ತಮ ಸಹಕಾರಿ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಮೂಲಕ ಹೆಚ್ಚಿನ ಸಾಲಸೌಲಭ್ಯ ಒದಗಿಸುವ ಜೊತೆಗೆ ಅತ್ಯುತ್ತಮವಾಗಿ ಕೆಲಸ ಮಾಡುವ ಮೂರು ಸಹಕಾರಿ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಹನುಮಂತಪ್ಪ ಸಿ. ವರ್ಷಕ್ಕೆ 8ಕ್ಕೂ ಹೆಚ್ಚು ತರಬೇತಿಗಳನ್ನು ಆಯೋಜಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ವ್ಯವಹರಿಸುವ ಕುರಿತು ಮಾಹಿತಿ ನೀಡಲಾಗುತ್ತದೆ. ಪ್ರತಿಯೊಂದು ಸಹಕಾರಿ ಸಂಸ್ಥೆಯ ಪ್ರಮುಖರು ಇಂತಹ ಕರ‍್ಯಾಗಾರಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವ ಮೂಲಕ ಮಾಹಿತಿ ತಿಳಿದುಕೊಳ್ಳಬೇಕು ಎಂದರು.

ಈ ವೇಳೆ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಮೃತೇಶ್ವರ ಬಿ.ಎಂ., ಸಹಕಾರ ಸಂಘಗಳ ಸಹಾಯಕ ನಿಬಂಧಕ ಸತೀಶ್ ಕುಮಾರ್ ಎಚ್.ಎಸ್. ಉಪಸ್ಥಿತರಿದ್ದರು. ಸುನಂದ ಪ್ರಾರ್ಥಿಸಿದರು. ಯಶವಂತ ಕುಮಾರ್ ಎಚ್. ಸ್ವಾಗತಿಸಿದರು. ದಿನೇಶ್ ಬಿ.ಜಿ. ಬರದವಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಮಾರುತಿ ಎಚ್.ಎಚ್. ವಂದಿಸಿದರು. ಸಂತೋಷ ಕುಮಾರ್ ಆರ್. ನಿರೂಪಿಸಿದರು.

SHOCKING: ಶಾಲಾ ಸಮಯದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

ಕರ್ನಾಟಕದ 157 ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆ.!

21/04/2026 5:47 AM1 Min Read

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ಇಂದಿನಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

21/04/2026 5:36 AM1 Min Read

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!

21/04/2026 5:32 AM1 Min Read
Recent News

ಕರ್ನಾಟಕದ 157 ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆ.!

21/04/2026 5:47 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ಇಂದಿನಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

21/04/2026 5:36 AM

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!

21/04/2026 5:32 AM

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಾರು ಪೂರ್ವ ಮಳೆ ಅಬ್ಬರ : ಸಿಡಿಲಿಗೆ ವೃದ್ಧೆ ಬಲಿ.!

21/04/2026 5:23 AM
State News
KARNATAKA

ಕರ್ನಾಟಕದ 157 ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆ.!

By kannadanewsnow5721/04/2026 5:47 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದರೂ, ಅಂತರ್ಜಲ ಮಟ್ಟಕ್ಕೆ ಸಂಬಂಧಿಸಿದಂತೆ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ಇಂದಿನಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

21/04/2026 5:36 AM

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!

21/04/2026 5:32 AM

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಾರು ಪೂರ್ವ ಮಳೆ ಅಬ್ಬರ : ಸಿಡಿಲಿಗೆ ವೃದ್ಧೆ ಬಲಿ.!

21/04/2026 5:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.