Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

15/03/2026 12:10 PM

BREAKING : ಇಂದು ಬಾಗಲಕೋಟೆ, ದಾವಣಗೆರೆ ಉಪಚುನಾವಣೆಗು ದಿನಾಂಕ ಘೋಷಣೆ ಸಾಧ್ಯತೆ!

15/03/2026 12:09 PM

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ನನ್ನ ತಾಳ್ಮೆ ಪರೀಕ್ಷೆ’ ಮಾಡಬೇಡ, ವಿದೇಶದಿಂದ ವಾಪಾಸ್ ಬಾ: ‘ಪ್ರಜ್ವಲ್’ಗೆ ಹೆಚ್.ಡಿ ದೇವೇಗೌಡ ವಾರ್ನಿಂಗ್
INDIA

BIG NEWS: ‘ನನ್ನ ತಾಳ್ಮೆ ಪರೀಕ್ಷೆ’ ಮಾಡಬೇಡ, ವಿದೇಶದಿಂದ ವಾಪಾಸ್ ಬಾ: ‘ಪ್ರಜ್ವಲ್’ಗೆ ಹೆಚ್.ಡಿ ದೇವೇಗೌಡ ವಾರ್ನಿಂಗ್

By kannadanewsnow0923/05/2024 4:20 PM

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಎಸ್ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಇದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿ, ಪತ್ರ ಬರೆದಿದ್ದಾರೆ. ಅದರಲ್ಲಿ ಏನಿದೆ ಅಂತ ಮುಂದೆ ಓದಿ.

ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಅಂತ ಪತ್ರ ಬರೆದಿದ್ದಾರೆ. ಅದರಲ್ಲಿ ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಏಕಾಂಗಿಯಾಗುವುದರಲ್ಲಿ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

I have issued a warning to @iPrajwalRevanna to return immediately from wherever he is and subject himself to the legal process. He should not test my patience any further. pic.twitter.com/kCMuNJOvAo

— H D Deve Gowda (@H_D_Devegowda) May 23, 2024

BREAKING: ಪರಿಷತ್ ಚುನಾವಣೆಯಲ್ಲಿ ಬಂಡಾಯ ಹಿನ್ನಲೆ: ಕಾಂಗ್ರೆಸ್ ಪಕ್ಷದಿಂದ ಎಸ್.ಪಿ ದಿನೇಶ್ ಸೇರಿ ಐವರು ಉಚ್ಛಾಟನೆ

ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

Share. Facebook Twitter LinkedIn WhatsApp Email

Related Posts

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

15/03/2026 12:10 PM1 Min Read

ದೆಹಲಿಯಲ್ಲಿ ಸ್ವಚ್ಛತಾ ಅಭಿಯಾನದ ವೇಳೆ, ಕಸದ ರಾಶಿಯಲ್ಲಿ ಮಾನವನ ಅಸ್ತಿಪಂಜರ ಪತ್ತೆ : ಬೆಚ್ಚಿ ಬಿದ್ದ ಜನತೆ!

15/03/2026 11:49 AM1 Min Read

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ನಡುಗಿದ ಟೆಲ್ ಅವಿವ್, ಮುಗಿಲು ಮುಟ್ಟಿದ ಸೈರನ್ ಅಬ್ಬರ!

15/03/2026 11:47 AM1 Min Read
Recent News

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

15/03/2026 12:10 PM

BREAKING : ಇಂದು ಬಾಗಲಕೋಟೆ, ದಾವಣಗೆರೆ ಉಪಚುನಾವಣೆಗು ದಿನಾಂಕ ಘೋಷಣೆ ಸಾಧ್ಯತೆ!

15/03/2026 12:09 PM

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM

ದೆಹಲಿಯಲ್ಲಿ ಸ್ವಚ್ಛತಾ ಅಭಿಯಾನದ ವೇಳೆ, ಕಸದ ರಾಶಿಯಲ್ಲಿ ಮಾನವನ ಅಸ್ತಿಪಂಜರ ಪತ್ತೆ : ಬೆಚ್ಚಿ ಬಿದ್ದ ಜನತೆ!

15/03/2026 11:49 AM
State News
KARNATAKA

BREAKING : ಇಂದು ಬಾಗಲಕೋಟೆ, ದಾವಣಗೆರೆ ಉಪಚುನಾವಣೆಗು ದಿನಾಂಕ ಘೋಷಣೆ ಸಾಧ್ಯತೆ!

By kannadanewsnow0515/03/2026 12:09 PM KARNATAKA 1 Min Read

ಬಾಗಲಕೋಟೆ / ದಾವಣಗೆರೆ : ಕೇಂದ್ರ ಚುನಾವಣೆ ಆಯೋಗವು ಇಂದು ಪಂಚ ರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ…

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM

ಮೈಶುಗರ್ ಭ್ರಷ್ಟಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

15/03/2026 11:41 AM

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

15/03/2026 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.