ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನುಡಿದಂತೆ ನಡೆಯದ, ಸುಳ್ಳು ಹೇಳಿಕೊಂಡು ಜನರನ್ನು ಎತ್ತಿಕಟ್ಟುತ್ತಿರುವಂತ ಬಿಜೆಪಿ, ಜೆಿಎಸ್ ಪಕ್ಷಕ್ಕೆ ಮತ ಹಾಕಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಗೆಲ್ಲಿಸಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮಂಡ್ಯದ ಮಳವಳ್ಳಿಯಲ್ಲಿ ಇಂದು ಗ್ಯಾರಂಟಿ ಯೋಜನೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಬಿಜೆಪಿ, ಜೆಡಿಎಸ್ ಪಕ್ಷದವರು ಕೊಟ್ಟ ಮಾತು ಯಾವತ್ತೂ ಉಳಿಸಿಕೊಂಡಿಲ್ಲ. ಮಾತು ತಪ್ಪಿದ್ದಾರೆ. ನಾವು ಅಧಿಕಾರಕ್ಕೆ ಬಂದ 8 ತಿಗಂಳಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
ನಮ್ಮ ಸರ್ಕಾರ ಐದು ಗ್ಯಾರಂಟಿ ಜಾರಿ ಮಾಡಿದೆ. ನುಡಿದಂತೆ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತ ಮಂಡ್ಯದ ಮಳವಳ್ಳಿಯ ಜನತೆಗೆ ಧನ್ಯವಾದಗಳು. ಮಳವಳ್ಳಿ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ ಎಂದರು.
ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ 28 ಸೀಟುಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲೋದಕ್ಕೆ ಸಾಧ್ಯನ ಅಂತ ಕೇಳುತ್ತಿದೆ. ನೀವು ವಿಧಾನಸಭಾ ಚುನಾವಣೆಯಲ್ಲಿ ಆಶೀರ್ವದಿಸಿದ್ದೀರಿ. ಲೋಕಸಭಾ ಚುನಾವಣೆಯಲ್ಲೂ ಆಶೀರ್ವದಿಸೋ ಭರವಸೆ ಇದೆ. ಹೀಗಾಗಿ ನಾವು ರಾಜ್ಯದಲ್ಲಿ 20 ಸ್ಥಾನವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲೋದಾಗಿ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
BREAKING: ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ‘ರಾಜ್‌ಕುಮಾರ್ ಸಂತೋಷಿ’ಗೆ ಜಾಮೀನು