ಬೆಂಗಳೂರು : ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಮತ ಹಾಕಬೇಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್‌ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೆ ಕಾಂಗ್ರೆಸ್‌ ಗೆ ಮತ ಹಾಕಬೇಡಿ. ನಿಮ್ಮ ಅಣ್ಣ, ತಮ್ಮ ಯಾರೇ ನಿಂತರೂ ಕಾಂಗ್ರೆಸ್‌ ಮತ ಹಾಕಬೇಡಿ. ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗಲ್ಲ. ಅದಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿದೆ. ನಿಮ್ಮ ಯೋಗ್ಯತೆಗೆ ಹಾಲಿನ ಪ್ರೋತ್ಸಾಹಧನ ಕೊಟ್ಟಿಲ್ಲ. ತಿಂಗಳಾದ್ರೂ ಶಾಲೆಗಳಿಗೆ ಪಠ್ಯಪುಸ್ತಕ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Share.
Exit mobile version