ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನಡೆಯುತ್ತಿದ್ದು ಸದ್ಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ತೀವ್ರ ಜಟಾಪಟಿ ನಡೆಯುತ್ತಿದೆ. ಇದೀಗ ಇಂದು ಬೆಂಗಳೂರಲ್ಲಿ ಡಿಕೆ ಶಿವಕುಮಾರ್ ಅವರು ಸದಾಶಿವ ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಒಂದೇ ಕಾರಿನಲ್ಲಿ ತೆರಳಿರುವುದು ಕುತೂಹಲ ಮೂಡಿಸಿದೆ.
ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀವು ಯಾವುದಕ್ಕೂ ಆತಂಕ ಪಡಬೇಡಿ ಎಂದು ಅಭಯ ನೀಡಿದ್ದಾರೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಸಂಗ್ರಹಿಸಿ ಎಂದು ದೆಹಲಿಗೆ ತೆರಳಿದ್ದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ನಿಮಗೆ ಅವರು ಕರೆ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಸಭೆ ಮಾಡಿದರೆ ನಾನು ಈ ವಿಚಾರವಾಗಿ ಚರ್ಚಿಸುತ್ತೇನೆ. ನಾಳೆ ಸಭೆ ಮಾಡಿದರೆ ಚರ್ಚಿಸುತ್ತೇನೆ ಇದು ಬಹಿರಂಗವಾಗಿ ಮಾತನಾಡುವ ವಿಷಯವಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ತಿಳಿಸಿದರು.








