ಬೆಂಗಳೂರು: ಮಂಕಿಪಾಕ್ಸ್ ವಿಶ್ವದಾದ್ಯಂತ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಮಂಕಿಪಾಕ್ಸ್ ಬಗ್ಗೆ ಜನರಲ್ಲಿ ಆತಂಕ, ಭಯ ಕೂಡ ಮನೆ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರವು ಮಂಕಿಪಾಕ್ಸ್ ಬಗ್ಗೆ ಆತಂಕ ಬೇಡ, ಈ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಲಾಗಿದ್ದು, ಎಂ ಪಾಕ್ಸ್ ಎಂಬುದು ಮಂಕಿಪಾಕ್ಸ್ ವೈರಸ್‌ನಿಂದ ಉಂಟಾಗುವ ವೈರಲ್ ಝೂನೋಟಿಕ್ ಕಾಯಿಲೆಯಾಗಿದೆ. ಈ ರೋಗವು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ/ದೈಹಿಕ/ಲೈಂಗಿಕ ಸಂಪರ್ಕ ಮತ್ತು ಸೋಂಕಿತ ವ್ಯಕ್ತಿಯ ದೈಹಿಕ ದ್ರವಗಳು, ಶರೀರದ ಮೇಲಿನ ದದ್ದುಗಳ ಸ್ರಾವಗಳ ಮೂಲಕ ಹರಡಬಹುದು ಎಂದಿದೆ.
ಮಂಕಿಪಾಕ್ಸ್ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ವೈಯಕ್ತಿಕ ಸ್ವಚ್ಛತೆಯನ್ನು ಅಭ್ಯಾಸ ಮಾಡಿ ಮತ್ತು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ/ಲೈಂಗಿಕ ಸಂಪರ್ಕವನ್ನು ತಪ್ಪಿಸಿ ಎಂದು ತಿಳಿಸಿದೆ.
ಎಂ ಪಾಕ್ಸ್ ಎಂಬುದು ಮಂಕಿಪಾಕ್ಸ್ ವೈರಸ್‌ನಿಂದ ಉಂಟಾಗುವ ವೈರಲ್ ಝೂನೋಟಿಕ್ ಕಾಯಿಲೆಯಾಗಿದೆ. ಈ ರೋಗವು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ/ದೈಹಿಕ/ಲೈಂಗಿಕ ಸಂಪರ್ಕ ಮತ್ತು ಸೋಂಕಿತ ವ್ಯಕ್ತಿಯ ದೈಹಿಕ ದ್ರವಗಳು, ಶರೀರದ ಮೇಲಿನ ದದ್ದುಗಳ ಸ್ರಾವಗಳ ಮೂಲಕ ಹರಡಬಹುದು.
ಮಂಕಿಪಾಕ್ಸ್ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ವೈಯಕ್ತಿಕ… pic.twitter.com/rGY8FaS0TW
— DIPR Karnataka (@KarnatakaVarthe) September 9, 2024