ಬೆಂಗಳೂರು : ಪೆಟ್ರೋಲ್ ಡೀಸೆಲ್ ಏರಿಕೆಯಾಗುತ್ತಿದ್ದಂತೆ ಬಿಜೆಪಿ 17 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ಇದರ ಮಧ್ಯ, ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ಅಲ್ಲದೆ ‘ಗ್ಯಾರಂಟಿ’ ಯೋಜನೆಗಳಿಗೆ ಹಣ ಬೇಡವೇ? ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು, ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ. ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡುತ್ತಿದ್ದೇವೆ. ನಾವು ಫೈನಾನ್ಶಿಯಲ್ ಮೊಬಲೈಸೇಷನ್ ಮಾಡಲೇಬೇಕು. ಹಾಗಾಗಿ ಇತರ ರಾಜ್ಯಗಳ ಬೆಲೆ ತುಲನೆ ಮಾಡಿ ಏರಿಕೆ ಮಾಡಲಾಗಿದೆ.ನಾವು ತೈಲ ಬೆಲೆ ಏರಿಕೆ ಮಾಡಿದರೂ ಅದು ರಾಜ್ಯದ ಅಭಿವೃದ್ಧಿ, ಜನರಿಗಾಗಿಯೇ ಮಾಡುವುದಲ್ಲವೇ? ಪೆಟ್ರೋಲ್ ಡೀಸೆಲ್ ದರಗಳು ಬೇರೆ ರಾಜ್ಯಗಳಿಗಿಂತ ನಮ್ಮ ಹೆಚ್ಚಿಗೆ ಇದ್ದರೆ ಹೇಳಿ ಎಂದರು.