ಶಿವಮೊಗ್ಗ: ಇಂದು ನಗರದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಹಳೇ ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳು ಸದ್ದು ಮಾಡಿವೆ. ಹೆಳೆಯ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಇಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಬಳಿಯಲ್ಲಿ ಇರುವಂತ ಮೀನು ಮಾರುಕಟ್ಟೆಯ ಬಳಿ, ಇಬ್ಬರನ್ನು ಗುಂಪೊಂದು ಹಾಡು ಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯಾದವರನ್ನು ಶೋಯಬ್ ಆಲಿಯಾಸ್ ಸೆಬು ಎಂದು ಗುರುತಿಸಲಾಗಿದೆ. ಇನ್ನಬ್ಬರ ಗುರುತು ಪತ್ತೆಯಾಗಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’