ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ, ಅಜ್ಜಂಪಿರ್ ಖಾದ್ರಿ ಅವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡೋಕು ಮುಂಚೆ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ವಿವಾದದ ಹೇಳಿಕೆ ನೀಡಿದ್ದಾರೆ.
ಇಂದು ಶಿಗ್ಗಾವಿಯಲ್ಲಿ ಆದಿ ಜಾಂಬವ ಸಮಾಜ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಡಾ.ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ ಎಂದು ನಾನು ಓದಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಿಡಿ ಹೊತ್ತಿಸಿದ್ದಾರೆ.
ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಆರ್ ಬಿ ತಿಮ್ಮಾಪುರ್ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ. ಜಿ ಪರಮೇಶ್ವರ್ ಹೋಗಿ ಪೀರ್ ಸಾಹೇಬ ಆಗುತ್ತಿದ್ದರು. ಎಲ್ ಹನುಮಂತಪ್ಪ ಹೋಗಿ ಹಸನ್ ಸಾಬ್ ಆಗುತ್ತಿದ್ದರು ಈಗಲೂ ಎಲ್ಲಿ ದಲಿತ ಕೇರಿ ಇದೆಯೋ ಅಲ್ಲಿ ದರ್ಗಾ ಇದೆ. ದಲಿತರು ಮುಸ್ಲಿಮರ ನಡುವಿನ ಬಾಂಧವ್ಯ ಹಾಗೆ ಇದೆ ಎಂದು ಹೇಳಿದ್ದಾರೆ.