ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ದಿನೇಶ್ ಅವರನ್ನು, ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ.
ಡಾ.ಬಿ ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ Interventional Cardiologist ಮತ್ತು Professor in the Department of Cardiology ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ದೊಡ್ಡೆಬಾಗಿಲು ಗ್ರಾಮದ ಕೃಷಿಕ ಕುಟುಂಬದಲ್ಲಿ ಡಾ.ದಿನೇಶ್ ಜನಿಸಿದ್ದರು. ಮೈಸೂರಲ್ಲಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಕೆ ಆರ್ ಆಸ್ಪತ್ರೆಯಲ್ಲಿ ಎಂಡಿ ವ್ಯಾಸಂಗ ಮಾಡಿದ ಬಳಿಕ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿಭಾಗದ ಉಪನ್ಯಾಸಕರಾಗಿ, ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಆಹಾರ, ನಾಗರಿಕ ಸರಬರಾಜು ಇಲಾಖೆ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ, ಹೀಗಿದೆ ಹೈಲೈಟ್ಸ್