ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಡಾ.ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ, ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ.
BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath






