ಶಿವಮೊಗ್ಗ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವಿನ ಓಟದಲ್ಲಿ ಮುಂದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಎನ್ನುವಂತೆ ಭದ್ರಾವತಿ ತಾಲೂಕಿನಲ್ಲಿ ಮತದಾರರು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಭಾರೀ ಬೆಂಬಲ ವ್ಯಕ್ತ ಪಡಿಸಿರೋದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾರರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಮತಬೇಟೆಗೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಟೊಂಕಕಟ್ಟಿ ನಿಂತಿದ್ದಾರೆ ಎನ್ನುವಂತೆ ಮತಯಾಚನೆಯಲ್ಲಿ ತೊಡಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ತಮ್ಮ ನಿವಾಸದಲ್ಲಿ ಶಿಕ್ಷಕರು, ಶಿಕ್ಷಕರ ಸಂಘಟನೆಯೊಂದಿಗೆ ಸಭೆ ನಡೆಸಿದರು. ಈ ವೇಳೆಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಗೆ ಮೊದಲ ಪ್ರಾಶಸ್ತ್ಯ ಮತ ನೀಡುವಂತೆ ಮನವಿ ಮಾಡಿದರು.
ಶಾಸಕ ಬಿ.ಕೆ ಸಂಗಮೇಶ್ ಮನವಿಗೆ ಮನವೊಲಿದಿರುವಂತ ನೈರುತ್ಯ ಶಿಕ್ಷಕ, ಪದವೀಧರ ಕ್ಷೇತ್ರದ ಮತದಾರರು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಒಲವು ತೋರಿದ್ದಾರೆ ಎನ್ನಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್, ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಗೆ ಬೆಂಬಲಿಸೋದಾಗಿ ಬೆಂಬಲ ನೀಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ದುಂಬಾಲು; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿಕೆಶಿ
ಜೂ.3ರಂದು ವಿಧಾನ ಪರಿಷತ್ ಚುನಾವಣೆ: ಮತಬೇಟೆಗೆ ಇಳಿದ ‘ಶಾಸಕ ಬೇಳೂರು ಗೋಪಾಲಕೃಷ್ಣ’ | MLC Election