ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಭೇಟಿಯಾದರು. ಅವರಿಗೆ ನಿಮ್ಮ ಗೆಲುವು ನಿಶ್ಚಿತ ಅಂತ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ಇಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿಯಾಗಿ, ಪರಿಷತ್ ಚುನಾವಣೆಯಲ್ಲಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು.
ಡಾ.ಕೆ.ಕೆ ಮಂಜುನಾಥ್ ಅವರ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಸ್ಪೀಕರ್ ಯು.ಟಿ ಖಾದರ್ ಅವರು, ನಿಮ್ಮ ಗೆಲುವು ನಿಶ್ಚಿತ. ಸದಾ ನಾವು ನಿಮ್ಮ ಪರವಾಗಿದ್ದೇವೆ ಎಂಬುದಾಗಿ ಅಭಯ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ರಾಜ್ಯ ಅಧ್ಯಕ್ಷರಾದ G ಹನುಮಂತಪ್ಪ ಬೆಂಬಲವನ್ನು ಸೂಚಿಸಿದರು.
ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ತಂದುಕೊಟ್ಟಿದ್ದೇ ಚಾಲಕ ಕಾರ್ತಿಕ್: HDK ಸ್ಪೋಟಕ ಬಾಂಬ್
BREAKING : ವಿಜಯಪುರದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು