ಬೆಂಗಳೂರು: ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ( Jayadeva Hospital ) ನಿರ್ದೇಶಕ ಡಾ.ಸಿಎನ್ ಮಂಜುನಾಥ್ ( Dr CN Manjunath ) ಅವರ ಸೇವಾವಧಿಯನ್ನು ಇದೀಗ ಮತ್ತೆ ಒಂದು ವರ್ಷ ವಿಸ್ತರಿಸಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ
ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದಂತ ಡಾ.ಸಿಎನ್ ಮಂಜುನಾಥ್ ಅವರ ಅವಧಿ ದಿನಾಂಕ 19-07-2022ಕ್ಕೆ ಮುಕ್ತಾಯಗೊಳ್ಳಲಿದೆ.
BREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ನಂದಿನ ಉತ್ಪನ್ನ’ಗಳ ದರ ಇಳಿಕೆ | Nandini Product Price
ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು, ಸಂಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಡಾ.ಸಿಎನ್ ಮಂಜುನಾಥ್ ಅವರನ್ನು ದಿನಾಂಕ 20-07-2022 ರಿಂದ ದಿನಾಂಕ 19-07-2023ರವರೆಗೆ ಜಯದೇವ ಆಸ್ಪತ್ರೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಿದ್ದಾರೆ.