ಶಿವಮೊಗ್ಗ: ರಾಜ್ಯ ಸರ್ಕಾರವು ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅವರನ್ನು ನೇಮಕ ಮಾಡಿ ಆದೇಶ ಮಾಡಿತ್ತು. ಅದರಂತೆ ಅವರು ಇಂದು ಸಾಗರದ ತಹಶೀಲ್ದಾರರ ಕಚೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡರು.
ಕಳೆದ ಮೇ.27ರಂದು ರಾಜ್ಯ ಸರ್ಕಾರವು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರಾಗಿದ್ದಂತ ಡಾ.ಪ್ರತಿಭಾ.ಆರ್ ಅವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ಖಾಲಿ ಹುದ್ದೆಗೆ ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಈ ಹುದ್ದೆಯಲ್ಲಿದ್ದಂತ ಪ್ರದೀಪ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅವರು ಸಾಗರದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಅವರಿಗೆ ಪ್ರಭಾರ ತಹಶೀಲ್ದಾರ್ ಆಗಿದ್ದಂತ ಪ್ರದೀಪ್ ಅವರು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿದರು.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!








