Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಹೀಗೆ `ಇ-ಸ್ವತ್ತು’ ಪಡೆದುಕೊಳ್ಳಿ.!

29/04/2026 5:35 AM

BIG NEWS : ರಾಜ್ಯದಲ್ಲಿ ತಳವಾರ ಸೇರಿ ಎಲ್ಲ ಅರ್ಹ ಸಮುದಾಯಗಳಿಗೂ `ST’ ಪ್ರಮಾಣಪತ್ರ: ಸಚಿವ ಪ್ರಿಯಾಂಕ್ ಖರ್ಗೆ

29/04/2026 5:33 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ.!

29/04/2026 5:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ
KARNATAKA

ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

By kannadanewsnow0902/05/2025 6:09 PM

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.

ಕನ್ನಡದ ಅಸ್ಮಿತೆಯಾಗಿರುವ ಸರ್ಕಾರಿ ಶಾಲೆಗಳು ಈಗಾಗಲೇ ಇಳಿಮುಖವಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಿಂದ ದುಸ್ಥಿತಿಗೆ ತಲುಪಿವೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದು ಸಾವಿರಾರು ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ತಾಯ್ನುಡಿಯ ಶಿಕ್ಷಣದ ವೈಜ್ಞಾನಿಕ ಅವಶ್ಯಕತೆಯನ್ನು ಹಿನ್ನೆಲೆಗೆ ಸರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕನ್ನಡ ಕೇವಲ ಆಡುಭಾಷೆಯಾಗಿ ಉಳಿಯುವ ಅಪಾಯ ತಪ್ಪಿದ್ದಲ್ಲ ಎಂದು ಬಿಳಿಮಲೆ ಹೇಳಿದ್ದಾರೆ.

ಅತಿಥಿ ಶಿಕ್ಷಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಕಳೆದ ಸಾಲಿನಲ್ಲಿ ಕೇವಲ ನಲವತ್ತಮೂರು ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದು, ಇದು ಬೋಧನಾ ವ್ಯವಸ್ಥೆಯನ್ನು ಇನ್ನಷ್ಟು ಸಂಕೀರ್ಣವಾಗಿಸಿದೆ. ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವು ನರೇಗಾ ದಿನಗೂಲಿ ಮೊತ್ತಕ್ಕಿಂತ ಕಡಿಮೆ ಇದ್ದು, ಅವರುಗಳ ಸೇವಾ ಭದ್ರತೆ ಸೇರಿದಂತೆ ಕನಿಷ್ಠ ಅವಕಶ್ಯಕತೆಗಳನ್ನು ಸಹ ಈಡೇರಿಸದೇ ಹೋದಲ್ಲಿ ಅವರಿಂದ ಬದ್ಧತೆಯ ಕೆಲಸವನ್ನು ನಿರೀಕ್ಷಿಸುವುದು ಕಷ್ಟಸಾಧ್ಯವೆಂದಿರುವ ಬಿಳಿಮಲೆ, ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಿಕ್ಷಕರ ಕೊರತೆಯನ್ನು ನೀಗಿಸಬೇಕಾದ್ದು ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗುತ್ತದೆ. ಅತಿಥಿ ಶಿಕ್ಷಕರಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವ ವಾತಾವರಣವನ್ನು ಕಲ್ಪಿಸುವುದರ ಜೊತೆಯಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರವು ಮೊದಲ ಆದ್ಯತೆಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಶತಮಾನ ಕಂಡ ಶಾಲೆಗಳ ಕಾಯಕಲ್ಪಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ

ರಾಜ್ಯದಲ್ಲಿ 3500ಕ್ಕೂ ಅಧಿಕ ಶತಮಾನ ಕಂಡ ಸರ್ಕಾರಿ ಶಾಲೆಗಳಿದ್ದು ಇವುಗಳ ಕಾಯಕಲ್ಪಕ್ಕೆ ವರದಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಿದ್ಧಪಡಿಸುತ್ತಿದ್ದು, ಇದನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಶಿಕ್ಷಣ ಇಲಾಖೆಯು ಪ್ರಾಧಿಕಾರಕ್ಕೆ ಸಲ್ಲಿಸಿರುವ ವರದಿಯನ್ನು ಶಿಕ್ಷಣ ತಜ್ಞರ ಮೂಲಕ ಅಧ್ಯಯಿಸಲಾಗುತ್ತಿದ್ದು, ಈಗಾಗಲೇ ಪಾರಂಪರಿಕ ಶಾಲೆಗಳೆಂದು ಹೆಚ್ಚಿನ ಅನುದಾನವನ್ನು ಪಡೆದಿರುವ 143 ಶತಮಾನ ಕಂಡ ಸರ್ಕಾರಿ ಶಾಲೆಗಳ ಸ್ಥಿತಿಗತಿ, ಅನುದಾನದ ಸದುಪಯೋಗ, ಪರ್ಯಾಯ ಕ್ರಮಗಳ ಅಧ್ಯಯನ ಸೇರಿದಂತೆ ಎಲ್ಲ 3500 ಶತಮಾನ ಕಂಡ ಶಾಲೆಗಳ ಸಮಗ್ರ ಚಿತ್ರಣವನ್ನು ಈ ವರದಿಯು ಕಟ್ಟಿಕೊಡಲಿದ್ದು, ಶಾಲಾ ಶಿಕ್ಷಣ ಇಲಾಖೆಗೆ ಇದು ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

ಸಾರ್ವಜನಿಕರೇ ಗಾಳಿ ಮಳೆ ವೇಳೆ ಮರಗಳ ಕೆಳಗೆ ನಿಲ್ಲಬೇಡಿ: ಬೆಂಗಳೂರು ಜನತೆಗೆ ಬಿಬಿಎಂಪಿ ಮನವಿ

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಹೀಗೆ `ಇ-ಸ್ವತ್ತು’ ಪಡೆದುಕೊಳ್ಳಿ.!

29/04/2026 5:35 AM1 Min Read

BIG NEWS : ರಾಜ್ಯದಲ್ಲಿ ತಳವಾರ ಸೇರಿ ಎಲ್ಲ ಅರ್ಹ ಸಮುದಾಯಗಳಿಗೂ `ST’ ಪ್ರಮಾಣಪತ್ರ: ಸಚಿವ ಪ್ರಿಯಾಂಕ್ ಖರ್ಗೆ

29/04/2026 5:33 AM2 Mins Read

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ.!

29/04/2026 5:28 AM1 Min Read
Recent News

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಹೀಗೆ `ಇ-ಸ್ವತ್ತು’ ಪಡೆದುಕೊಳ್ಳಿ.!

29/04/2026 5:35 AM

BIG NEWS : ರಾಜ್ಯದಲ್ಲಿ ತಳವಾರ ಸೇರಿ ಎಲ್ಲ ಅರ್ಹ ಸಮುದಾಯಗಳಿಗೂ `ST’ ಪ್ರಮಾಣಪತ್ರ: ಸಚಿವ ಪ್ರಿಯಾಂಕ್ ಖರ್ಗೆ

29/04/2026 5:33 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ.!

29/04/2026 5:28 AM

SHOCKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಸಾವು!

29/04/2026 5:26 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಹೀಗೆ `ಇ-ಸ್ವತ್ತು’ ಪಡೆದುಕೊಳ್ಳಿ.!

By kannadanewsnow5729/04/2026 5:35 AM KARNATAKA 1 Min Read

ಬೆಂಗಳೂರು: ರಾಜ್ಯದ ನಾಗರಿಕರು ತಮ್ಮ ಆಸ್ತಿ ಹಕ್ಕು ದಾಖಲೆಗಳನ್ನು (ನಮೂನೆ 11ಎ ಮತ್ತು 11ಬಿ) ಪಡೆಯುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರವು…

BIG NEWS : ರಾಜ್ಯದಲ್ಲಿ ತಳವಾರ ಸೇರಿ ಎಲ್ಲ ಅರ್ಹ ಸಮುದಾಯಗಳಿಗೂ `ST’ ಪ್ರಮಾಣಪತ್ರ: ಸಚಿವ ಪ್ರಿಯಾಂಕ್ ಖರ್ಗೆ

29/04/2026 5:33 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ.!

29/04/2026 5:28 AM

SHOCKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಸಾವು!

29/04/2026 5:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.