ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡದ ಅಸ್ಮಿತೆಯಾಗಿರುವ ಸರ್ಕಾರಿ ಶಾಲೆಗಳು ಈಗಾಗಲೇ ಇಳಿಮುಖವಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಿಂದ ದುಸ್ಥಿತಿಗೆ ತಲುಪಿವೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದು ಸಾವಿರಾರು ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ತಾಯ್ನುಡಿಯ ಶಿಕ್ಷಣದ ವೈಜ್ಞಾನಿಕ ಅವಶ್ಯಕತೆಯನ್ನು ಹಿನ್ನೆಲೆಗೆ ಸರಿಸಲಾಗುತ್ತಿದೆ. ಇದೇ … Continue reading ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ