ಬೆಂಗಳೂರು : ವರನಟ ಡಾ. ರಾಜಕುಮಾರ್ ಅವರ ಪುತ್ಥಳಿಯನ್ನು ಬಿಬಿಎಂಪಿ ಸಿಬ್ಬಂದಿಗಳು ಕೆಡವಿ ಹಾಕಿರುವ ಘಟನೆ ಚಿಕ್ಕಪೇಟೆಯಲ್ಲಿ ನಡೆದಿದೆ.
ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಚಿಕ್ಕಪೇಟೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳು ರಾಜ್ ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿದ್ದರು. ಆದರೆ ಬಿಬಿಎಂಪಿ ಸಿಬ್ಬಂದಿಗಳು ಜೆಸಿಬಿ ಮೂಲಕ ಪುತ್ಥಳಿಯನ್ನು ತೆರವು ಮಾಡಿಸಿದ್ದು, ಸ್ಥಳೀಯರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು ಚಿಕ್ಕಪೇಟೆಯಲ್ಲಿ ಪುತ್ಥಳಿ ಸ್ಥಾಪನೆಗೆ ಬಿಬಿಎಂಪಿಯ ಅನುಮತಿ ಪಡೆದಿಲ್ಲ. ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಸ್ಥಾಪನೆಗೆ ಅನುಮತಿಸಲಾಗುವುದಿಲ್ಲ ಎಂದು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.