ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ.
ಇಂದು ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 31.05.2024 ರಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಅಧಿನಿಯಮ, 1974ರ ಪ್ರಕರಣ 6 (1) (ಜಿ) ರಡಿ ಪುದತ್ತವಾದ ಅಧಿಕಾರ ಚಲಾಯಿಸಿ ಡಾ.ಶಾಂತ್ ಎ. ತಿಮ್ಮಯ್ಯ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರನ್ನು ಮಂಡಳಿಯ ಸದಸ್ಯ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿ, ತತ್ಪರಿಣಾಮವಾಗಿ ಅವರನ್ನು ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಅನುಚ್ಛೇದ 4(2)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶ್ರೀ. ಬಿ.ಪಿ.ರವಿ, ಭಾ.ಅ.ಸೇ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿಪರಿಸ್ಥಿತಿ ಮತ್ತು ಪರಿಸರ), ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಇವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಅಧಿಕ ಪ್ರಭಾರದಲ್ಲಿರಿಸಿ ನಾಮ ನಿರ್ದೇಶನ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು
ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ