ಹಾಸನ : ಹಾಸನದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಸ್ಫೋಟಕ ವಾದ ದಂತಹ ಹೇಳಿಕೆಯನ್ನು ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಮುಂದಿನ ಪೂರ್ಣಾ ಅವಧಿ ಐದು ವರ್ಷಗಳವರೆಗೆ ಅವರೇ ಸಿಎಂ ಆಗಲಿದ್ದು 5 ವರ್ಷ ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂಬ ಹೇಳಿಕೆ ಇದೀಗ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಹಾಸನದಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿಎಂ ಗೆ ಮತ್ತಷ್ಟು ಬೆಂಬಲ ಸಿಗುತ್ತದೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56,000 ಕೋಟಿ ಕಾರ್ಯಕ್ರಮ ಆಗುತ್ತದೆ.ರಾಜ್ಯದಲ್ಲಿ ಯಾವ ಸರ್ಕಾರವೂ ಕೂಡ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಜನರ ಬೆಂಬಲ ಬೇಕಾಗುತ್ತದೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಾರೆ ಎಂದು ತಿಳಿಸಿದ್ದಾರೆ.
ಈ ಒಂದು ಹೇಳಿಕೆಯೊ ಭಾರಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೇ ಎನ್ನಲಾಗುತ್ತಿದ್ದು ಏಕೆಂದರೆ ಈಗಾಗಲೇ ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಕಾಂಗ್ರೆಸ್ನ ಹಲವು ಸಚಿವರು ಆಗಾಗ ಪದೇ ಪದೇ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ ಇದೀಗ ಯತಿಂದ್ರ ಅವರು ಮುಂದಿನ ಐದು ವರ್ಷಗಳವರೆಗೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂಬ ಹೇಳಿಕೆಯು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲುವುದರ ಮೇಲೆ ಅವಲಂಬನೆಯಾಗಿದೆ ಎಂದು ಹೇಳಲಾಗುತ್ತಿದೆ.
ಏಕೆಂದರೆ ಈಗಾಗಲೇ ಕಾಂಗ್ರೆಸ್ ಹಲವು ಸಚಿವರು ಹೈಕಮಾಂಡ್ ಬುಲಾವ್ ಮೇರೆಗೆ ಇತ್ತೀಚಿಗೆ ದೆಹಲಿಗೆ ತೆರಳಿದ್ದರು ಅಲ್ಲಿ ಹಲವು ಸಚಿವರಿಗೆ ಜವಾಬ್ದಾರಿಗಳನ್ನು ನೀಡಲಾಗಿದ್ದು ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲಾಗುತ್ತಿದ್ದು ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಸೋತರೆ ಈಗಿರುವ ಸಚಿವ ಸ್ಥಾನಕ್ಕೆ ಅವರೇ ತಲೆ ದಂಡ ತರಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಒಂದು ವರಿಷ್ಠರ ಸೂಚನೆಯೂ ಕೇವಲ ಸಚಿವರಿಗಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಹಿಡಿದುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೂಡ ಅನ್ವಯಿಸುತ್ತದೆ ಏಕೆಂದರೆ ಇವರಿಗೂ ಕೂಡ ಲೋಕಸಭೆ ಚುನಾವಣೆಯಲ್ಲಿ ಮಹತ್ತರವಾದಂತಹ ಜವಾಬ್ದಾರಿ ಇರಲಿದ್ದು ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಹೋದರೆ ಮುಖ್ಯಮಂತ್ರಿ ಸ್ಥಾನಕ್ಕೂ ಕೂಡ ಸ್ವಲ್ಪ ಅಡೆ-ತಡೆ ಎದುರಾಗಬಹುದು ಎಂದು ತಿಳಿದುಬಂದಿದೆ.
ಹೀಗಾಗಿ ಡಾ. ಯತೀಂದ್ರ ಅವರು ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಂದಿನ ಪೂರ್ಣಾವಧಿವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ನೀಡಿರಬಹುದು ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.