Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!
KARNATAKA

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

By kannadanewsnow57

ಬಳ್ಳಾರಿ : ರಸ್ತೆ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವ ಮೂಲಕ ವಾಹನ ಚಾಲನೆ ಮಾಡುವವರೇ ನಿಜವಾದ ಹೀರೋಗಳಾಗುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಜಿ ಶಾಂತಿ ಅವರು ಹೇಳಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 37 ನೇ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು. ರಸ್ತೆ ನಿಯಮ ಉಲ್ಲಂಘಿಸಿ, ಸಿಗ್ನಲ್ ಜಂಪ್ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಚಲಾಯಿಸುವುದು ಸಾಹಸವಲ್ಲ; ಬದಲಾಗಿ ನಿಯಮ ಪಾಲಿಸಿ ವಾಹನ ಚಲಾಯಿಸಿದರೆ ಮಾತ್ರ ಸುರಕ್ಷಿತರಾಗಿ ಮನೆಗೆ ಸೇರಬಹುದು ಎಂದರು.
18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ನೀಡಿದಲ್ಲಿ ಮಕ್ಕಳ ಪೋಷಕರ ವಿರುದ್ಧ ಪ್ರಕರಣ ಮತ್ತು 25,000 ಸಾವಿರ ದಂಡವಿದೆ. ಚಾಲನಾ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವಂತಿಲ್ಲ. ಈ ಕುರಿತು ಪ್ರತಿಯೊಬ್ಬರೂ ಎಚ್ಚರವಹಿಸಬೇಕು. 5 ಬಾರಿಗಿಂತ ಪ್ರಕರಣ ದಾಖಲಾದಲ್ಲಿ ಅಂತಹವರ ಚಾಲನಾ ಪರವಾನಿಗೆ ಶ್ವಾಶತವಾಗಿ ರದ್ದುಪಡಿಸುವ ಕಾನೂನಿದೆ ಎಂದು ತಿಳಿಸಿದರು.

ರಸ್ತೆ ಅಪಘಾತಗಳು ಅಪಾಯಕಾರಿಯಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಲು ಜನವರಿ ಮಾಸಾದ್ಯಂತ ಜಿಲ್ಲೆಯಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದೆಯೂ ನಿರಂತರವಾಗಿ ಪಾಲಿಸಿದಲ್ಲಿ ಮಾತ್ರ ಈ ಮಾಸಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸುರಕ್ಷತೆಯು ಮೊದಲ ಆದ್ಯತೆಯಾಗಬೇಕು. ಅದು ರಸ್ತೆ ಸುರಕ್ಷತೆಯಾಗಿರಬೇಕು. ಬದಲಾವಣೆ ನಮ್ಮಿಂದ ಮಾತ್ರ ಸಾಧ್ಯವಾಗಿದ್ದು, ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದರು.

ಆಡುಭಾಷೆಯAತೆ ‘ಅತಿ ವೇಗ-ತಿಥಿ ಬೇಗ’ ಎನ್ನುವ ಹಾಗೆ ಅತಿವೇಗದ ಚಾಲನೆ ನಮ್ಮ ಪ್ರಾಣಕ್ಕೆ ಕುತ್ತು ತರಲಿದ್ದು, ಇದನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ನಿಧಾನವಾಗಿ ಚಾಲನೆ ಮಾಡಬೇಕು. ಜೀವ ಮತ್ತು ಜೀವನ ಅಮೂಲ್ಯವಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಶಿಸ್ತು ಅಳವಡಿಸಿಕೊಂಡು ವಾಹನ ಚಲಾಯಿಸೋಣ ಎಂದು ತಿಳಿಸಿದರು.

ರಸ್ತೆ ಅಪಘಾತ ಸಂದರ್ಭದಲ್ಲಿ ತಪ್ಪದೇ ಸಹಾಯ ಹಸ್ತ ನೀಡಬೇಕು. ಅಂತಹವರನ್ನು ಪ್ರಥಮವಾಗಿ ಆಸ್ಪತ್ರೆಗೆ ಸೇರಿಸಬೇಕು. ಆ ಸಂದರ್ಭದಲ್ಲಿ ಯಾವುದೇ ತಮ್ಮ ಮಾಹಿತಿಯನ್ನು ನೀಡುವುದು ಅಗತ್ಯವಿಲ್ಲ. ಆಸ್ಪತ್ರೆ ಮತ್ತು ಪೊಲೀಸ್ ಸಿಬ್ಬಂದಿ ಮಾಹಿತಿ ಪಡೆಯುವಂತಿಲ್ಲ. ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಈ ಕಾನೂನುನನ್ನು ಜಾರಿಗೊಳಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಜ್ಮಾ. ಡಿ.ಪೆನ್ನೇಕರ್ ಅವರು ಮಾತನಾಡಿ, ರಸ್ತೆ ಪಾದಾಚಾರಿಗಳು ಸಹ ಜಾಗ್ರತೆಯಿಂದ ರಸ್ತೆ ಸಂಚಾರ ನಿಮಯಗಳನ್ನು ಪಾಲಿಸಬೇಕಿದೆ. ಅವಘಡ ಯಾವ ರೀತಿಯಲ್ಲಾದರೂ ಸಂಭವಿಸಬಹುದಾಗಿದೆ. ರಸ್ತೆ ನಿಮಯ, ಸಂಚಾರಿ ಚಿಹ್ನೆಗಳನ್ನು ಅರಿತುಕೊಳ್ಳುವುದು ಅತ್ಯಗತ್ಯವಾಗಿದೆ. ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೆಲ್ಟ್ ಕಟ್ಟಿಕೊಳ್ಳಬೇಕು. ಚಾಲನೆ ವೇಳೆ ಮೊಬೈಲ್ ಫೋನ್ ಬಳಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮುಖ್ಯ ರಸ್ತೆ ಸಂಚಾರ ನಿಯಮಗಳನ್ನು ಕೈ ಸನ್ನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಕುರಿತಾದ ಭಿತ್ತಿಪತ್ರ ಅನಾವರಣಗೊಳಿಸಿದರು. ರಸ್ತೆ ಸುರಕ್ಷತೆ ಜಾಗೃತಿಯ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಪ್ರಭಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು, ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಆಟೋ, ಲಾರಿ ಸಂಘದ ಪದಾಧಿಕಾರಿಗಳು, ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Drivers beware: If you make this mistake your driving license will be canceled!
Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.