ಬೆಂಗಳೂರು: ನಗರದಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ನಿಯಮ ಮೀರಿ ಕಟ್ಟಡ ಕಟ್ಟುತ್ತಿರುವುದು ಗಮನಕ್ಕೆ ಬಂದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ… pic.twitter.com/2WRxbdR9Qs
— DIPR Karnataka (@KarnatakaVarthe) October 25, 2024
ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆಹಚ್ಚಲಾಗುವುದು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು.
ಬಿಎಂಆರ್ ಡಿಎ ಹಾಗೂ ಬಿಎಂಟಿಎಫ್ ವ್ಯಾಪ್ತಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಸೇರಲಿದ್ದು, ಈ ಪ್ರದೇಶಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಚರಂಡಿಗಳ ಹೂಳೆತ್ತಲಾಗುವುದು ಎಂದು ತಿಳಿಸಿದ್ದಾರೆ.
SHOCKING NEWS: ಕಲಬುರ್ಗಿಯಲ್ಲಿ ರೈಲಿಗೆ ತಲೆಕೊಟ್ಟು ‘SSLC ವಿದ್ಯಾರ್ಥಿ’ ಆತ್ಮಹತ್ಯೆ
ಚೆನ್ನೈನ ಶಾಲೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ಘಟನೆ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು