ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವಂತ ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು, ಬ್ಯಾಂಕ್ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು ಎಂದರು.
ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
BIG NEWS: ಕೆಲ ಕಾಂಗ್ರೆಸ್ ಶಾಸಕರ ನಂಬರ್ ಸಹ ಟ್ಯಾಪ್ ಆಗುತ್ತಿವೆ: ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ
ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!