ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಮಳೆ ಕೈಕೊಟ್ಟ ನಂತ್ರ ಬರ ಉಂಟಾದ ಕಾರಣ, ರೈತರ ನೆರವಿಗೆ ಧಾವಿಸಿತ್ತು. ರೈತರ ಬೆಳೆಗೆ ಬರ ಪರಿಹಾರವಾಗಿ 2000 ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಬರ ಪರಿಹಾರದ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಪ್ರಕಟಿಸಲಾಗಿದೆ.
ಕಳೆದ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂ. ನಂತೆ 32 ಲಕ್ಷ ರೈತರಿಗೆ ಈವರೆಗೆ 575 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದರು.
ರಾಜ್ಯದಲ್ಲಿ ಈ ವರ್ಷ ಇತಿಹಾಸ ಕಾಣದ ಬರ ಎದುರಾಗಿದೆ. ಕೇಂದ್ರದಿಂದ ಬರ ಪರಿಹಾರ ಈವರೆಗೆ ಲಭ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ ರೈತರಿಗೆ 2,000 ರೂ ನೀಡಲು ನಿರ್ಧರಿಸಿ ಈಗಾಗಲೇ 32 ಲಕ್ಷ ರೈತರಿಗೆ ಪರಿಹಾರದ ಹಣ ನೀಡಲಾಗಿದೆ. ಕೊಡಗಿನಲ್ಲೂ ಸಹ 11,000 ರೈತರಿಗೆ 1.5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದರು.
ಮುಂದುವರೆದು, ರೈತರ ಪರಿಹಾರದ ಹಣ ದುರುಪಯೋಗ ತಡೆಗಟ್ಟಲು ಈ ಬಾರಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಫ್ರೂಟ್ಸ್ ತಂತ್ರಾಂಶದ ಮೂಲಕ ಎಲ್ಲಾ ರೈತರಿಗೆ ಪರಿಹಾರದ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಪಾರದರ್ಶಕವಾಗಿ ಜಮಾ ಮಾಡಲಾಗಿದೆ ಎಂದು ಅವರು ತಿಳಿಸಿದ್ದರು.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಬರ ಪರಿಹಾರ ಪಟ್ಟಿ ಪ್ರಕಟ
ಇದೀಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.
BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ
BREAKING NEWS: ‘ಬಿಹಾರ ವಿಧಾನಸಭೆ’ಯಲ್ಲಿ ‘ಬಹುಮತ’ ಸಾಬೀತು ಪಡಿಸಿದ ‘ಸಿಎಂ ನಿತೀಶ್ ಕುಮಾರ್’ | Bihar Floor Test