ಕಲಬುರ್ಗಿ : ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಎಲ್ಲಾ ಅಧಿಕಾರಿಗಳು ಕೆಲಸ ಮಾಡುತ್ತಿದ್ದು ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ. ಹಾಗಾಗಿ ಎಲ್ಲಾ ಅಧಿಕಾರಿಗಳು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು.
ಇಂದು ಕಲಬುರ್ಗಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಸ್ಟರ್ ಡ್ಯಾಶ್ ಬೋರ್ಡ್ ಉದ್ಘಾಟಿಸಿ ಮಾತನಾಡಿದರು.ಇನ್ನುಮುಂದೆ ಕಲ್ಬುರ್ಗಿಯ ಎಲ್ಲಾ ಠಾಣಾ ವ್ಯಾಪ್ತಿಯ ನೇರ ದೃಶ್ಯ ಒಂದೆಡೆ ಲಭ್ಯವಾಗಲಿದೆ. ಕಲ್ಬುರ್ಗಿ ನಗರ ವ್ಯಾಪ್ತಿಯಲ್ಲಿ ಒಟ್ಟು 113 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು ಬೆಂಗಳೂರಿನಲ್ಲೂ ಈ ಸಿಸ್ಟಮ್ ಮಾಡುವ ಯೋಜನೆ ಇದೆ.
ಅದಕ್ಕೂ ಮೊದಲು ಕಲಬುರ್ಗಿಯಲ್ಲಿ ಈ ಒಂದು ಯೋಜನೆ ಅನುಷ್ಠಾನ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ ಇದ್ದು ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವಾಜಿ ಪರಮೇಶ್ವರ್ ತಿಳಿಸಿದರು.