ತ್ರದುರ್ಗ: ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಶರಣರ ವಿರುದ್ಧ ಕೊಲೆ ಆರೋಪ, ಮಾದಕವಸ್ತು ಬಳಕೆ ಆರೋಪವಿದೆ ಎನ್ನಲಾಗಿದೆ.
ಈ ಬಗ್ಗೆ ಒಡನಾಡಿ ಸಂಸ್ಥಾಪಕ ಸ್ಟ್ಯಾನ್ಲಿ ಮಾಹಿತಿ ನೀಡಿದ್ದು, ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವುದು, ಮಾನವ ಸಾಗಣೆ, ಅತ್ಯಾಚಾರ ಕೊಲೆ ಆರೋಪ ಮಾಡಿದ್ದಾರೆ. ಮುರುಘಾ ಶರಣರು ಡ್ರಗ್ಸ್ ತೆಗೆದುಕೊಂಡಿರುವ ಅನುಮಾನ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಮಠದಲ್ಲಿದ್ದ ಮಗುವಿನ ಮೇಲೆ ಅತ್ಯಾಚಾರ ನಡೆದು ನಂತರ ಮಗುವನ್ನು ಕೊಲೆ ಮಾಡಲಾಗಿದೆ. ಆ ಮಗುವಿನ ಶವ ರೈಲ್ವೆ ಹಳಿಗಳ ಮೇಲೆ ಸಿಕ್ಕಿತ್ತು ಪೊಲೀಸರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇನ್ನೂ, ,ಮಠದ ಆವಣದಲ್ಲಿ ಕಾಂಡೋಮ್ ಹಾಗೂ ಸಿರಂಜ್ ಕೂಡ ಸಿಕ್ಕಿದೆ , ಈ ಬಗ್ಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ವಿಕೃತ ಕಾಮಿಗಳನ್ನು ಮೀರಿಸುವ ರೀತಿಯಲ್ಲಿ ಮುರುಘಾ ಶರಣರು ವರ್ತಿಸಿದ್ದಾರೆ, ಅವರು ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಕೂಡ ಅನುಮಾನ ಇದೆ , ಪೊಲೀಸರು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇನ್ನೂ, ಮುರುಘಾ ಶರಣದ ವಿರುದ್ಧ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.