ಬೆಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯನ್ನು ಎನ್ ಸಿ ಬಿ ಅಧಿಕಾರಿಗಳು ಮಾಡಿದ್ದಾರೆ.
ಬೆಂಗಳೂರಿನ ಕೆಐಎಬಿಯಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ವಲಯದ ಎನ್ ಸಿ ಬಿ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ, ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ.
ಈ ಪ್ರಕರಣ ಸಂಬಂಧ ಎನ್ ಸಿ ಬಿ ಅಧಿಕಾರಿಗಳಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಜಪ್ತಿ ಮಾಡಲಾಗಿರುವಂತ ಡ್ರಗ್ಸ್ ಮೌಲ್ಯವು 50 ಕೋಟಿ ಮೌಲ್ಯದ್ದು ಎನ್ನಲಾಗಿದೆ. ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ ಮಾಹಿತಿ ಸಂಗ್ರಹಿಸಿ ಎನ್ ಸಿ ಬಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್.9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಇಬ್ಬರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದರು. ಇಬ್ಬರನ್ನು ವಿಚಾರಣೆ ನಡೆಸಿದಾಗ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿದೆ. ಅದರಂತೆ ಕಾದು ಶ್ರೀಲಂಕಾ ಪ್ರಜೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಹ್ಯಾಂಡ್ಲರ್ ನಿಂದ 14 ಕೆಜಿ ಹೈಡ್ರೋಗಾಂಜಾ, 2 ಕೆಜಿ ಅಣಬೆ ವಶಕ್ಕೆ ಪಡೆದಿದ್ದಾರೆ. 250 ವುಡ್ ಟಿನ್ ಗಳಲ್ಲಿ ಡ್ರೈಗ್ಸ್ ಸೀಲ್ ಮಾಡಿ ಆರೋಪಿಗಳು ತಂದಿದ್ದರು. 18 ಕೇಸ್ ಗಳಲ್ಲಿ ಮಾದಕವಸ್ತು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. 18 ಪ್ರಕರಣದಲ್ಲಿ 45 ಆರೋಪಿಗಳ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದಲ್ಲಿ ಈ ದಂಧೆ ನಡೆಸಲಾಗುತ್ತಿದ್ದ ಮಾಹಿತಿಯನ್ನು ಪತ್ತೆ ಹಚ್ಚಿದ್ದಾರೆ.
BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion
RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್