ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದು, ಹಾಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.