ದಾವಣಗೆರೆ : ಮಾ.25 ರಂದು(ನಾಳೆ) ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ದಾವಣಗರೆಯಲ್ಲಿ ಮಾ.25 ರಂದು ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದು, ಬಳ್ಳಾರಿ ವಿಭಾಗದಿಂದ ಒಟ್ಟು 350 ಬಸ್ಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದೆ. ಆದ್ದರಿಂದ ಮಾ.24 ಮತ್ತು 25 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡುತಿನಿ, ಕಂಪ್ಲಿ ಮತ್ತು ಸಂಡೂರು ಭಾಗಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿವೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.25 ರಂದು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ : ಮೆಡಿಕಲ್ ಕಾಲೇಜು ಉದ್ಘಾಟನೆ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮತ್ತು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾರ್ಚ್ 25 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾ.25ರಂದು ಮೆಡಿಕಲ್ ಕಾಲೇಜನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂ ವೆಚ್ಚದಲ್ಲಿ ಕಾಲೇಜು ನಿರ್ಮಾಣವಾಗಿದೆ. ಮಾ.25 ರಂದು ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತಲುಪಲಿದ್ದಾರೆ. ನಂತರ ಮಧ್ಯಾಹ್ನ 12:55 ಕ್ಕೆ ವೈಟ್ ಫೀಲ್ಡ್ ಮೆಟ್ರೋ ಹೊಸ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ಮಾರ್ಚ್ 25 ರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ ಅವರು ವೈಟ್ ಫೀಲ್ಡ್ ನಲ್ಲಿ ಮಹಾದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.. ನಂತರ ಮಧ್ಯಾಹ್ನ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
BIG NEWS : ಪ್ರವಾಸಿಗರ ಗಮನಕ್ಕೆ : ಇಂದಿನಿಂದ 2 ದಿನ ʻನಂದಿಗಿರಿಧಾಮʼಕ್ಕೆ ಪ್ರವೇಶ ನಿರ್ಬಂಧ |Nandi Hills
ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಮನೆಗೆ ಡಿಕ್ಕಿ ಹೊಡೆದ ಗ್ಲೈಡರ್ ವಿಮಾನ, ಇಬ್ಬರ ಸ್ಥಿತಿ ಗಂಭೀರ | WATCH VIDEO
BIG NEWS : ಪ್ರವಾಸಿಗರ ಗಮನಕ್ಕೆ : ಇಂದಿನಿಂದ 2 ದಿನ ʻನಂದಿಗಿರಿಧಾಮʼಕ್ಕೆ ಪ್ರವೇಶ ನಿರ್ಬಂಧ |Nandi Hills
ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಮನೆಗೆ ಡಿಕ್ಕಿ ಹೊಡೆದ ಗ್ಲೈಡರ್ ವಿಮಾನ, ಇಬ್ಬರ ಸ್ಥಿತಿ ಗಂಭೀರ | WATCH VIDEO