ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕಲ್ಬುರ್ಗಿ ಆರಾಧ್ಯದೈವರಾದ ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನದ ಎಂಟನೇ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪಾ ಅಪ್ಪಾಜಿ ನಿಧನರಾಗಿದ್ದರು. ಅವರ ನಿಧನದ ಬೆನ್ನಲ್ಲೇ ಇದೀಗ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇಂದು ನಿಧನರಾಗಿದ್ದಾರೆ.
ಶ್ರೀಗಳ ನಿಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದು, ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.
ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ… pic.twitter.com/frbvcx17YC
— DK Shivakumar (@DKShivakumar) August 16, 2025