Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು
KARNATAKA

BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ಮಳೆಯ ಅವಾಂತರ ಪರಿಶೀಲನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದರು. ಇದೀಗ ಮಳೆಯಿಂದಾಗಿ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿನ ಮಳೆಯ ಅಂವಾತರ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ ಅವರು ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದರು. ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ ಪರಿಶೀಲಿಸಿದರು.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಬಳಿಕ ನಗರದಲ್ಲಿ ಮಳೆ ಹೆಚ್ಚಾದ ಕಾರಣದಿಂದಾಗಿ ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕುಗೊಳಿಸುವಂತೆ ಆಯ್ತು.

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

Share. Facebook Twitter LinkedIn WhatsApp Email

Related Posts

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

2 Mins Read

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

2 Mins Read

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

2 Mins Read
Recent News

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

State News
KARNATAKA

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ…

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.