ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

ಬೆಂಗಳೂರು: ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ. ಇದೊಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಯಾವುದೇ ಜಾತಿ, ಸಮಾಜದವರು ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಎಂದು ಬಿಜೆಪಿಯ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯಿಸಿದ್ದೇವೆ ಎಂದು ತಿಳಿಸಿದರು. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಜಕೀಯ ಚಿಂತನಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು. ಜಾತಿ, … Continue reading ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ