ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಪಟಾಕಿ ಸಿಡಿದು ಓರ್ವ ಬಾಲಕ ಸಾವನಪ್ಪಿದ್ದ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಯೋಗೇಶ್ (15) ಇದೀಗ ಸಾವನ್ನಪ್ಪಿದ್ದಾನೆ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯೋಗೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಬಾಲಕ ಯೋಗೇಶ್ ಸಾವನ್ನಪ್ಪಿದ್ದಾನೆ. ಹಾಗಾಗಿ ಪಟಾಕಿ ಸ್ಪೋಟ ದುರಂತದಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.ಆಗಸ್ಟ್ 29 ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಈ ಒಂದು ಘಟನೆ ನಡೆದಿತ್ತು ಅಂದು ಓರ್ವ ಬಾಲಕ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದರು. ಇದೀಗ ಇಂದು ಮತ್ತೋರ್ವ ಬಾಲಕ ಯೋಗೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.