ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ನೀಡುವ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್‌ಗಳ ಸಂಘ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರ ಹೊರಡಿಸಿರುವ ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಶೋಕಾಸ್ ನೋಟಿಸ್ ನೀಡುತ್ತಿದೆ. ಇದರಿಂದ ಉದ್ಯೋಗದಾತರಿಗೆ ತೊಂದರೆಯಾಗುತ್ತಿದೆ ಎಂದರು.
ಇದಕ್ಕೆ ಪೀಠ, ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಹೀಗಿರುವಾಗ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುವುದು ಏಕೆ ಎಂದು ಪ್ರಶ್ನಿಸಿತು. ಅಲ್ಲದೇ ಶೋಕಾಸ್ ನೋಟಿಸ್‌ಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ತಿಳಿಸಿತು. ಜತೆಗೆ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿತು.
ನ್ಯಾಯಾಲಯದ ಪ್ರಮುಖ ಅಂಶಗಳು:
ಘನತೆಯ ಹಕ್ಕು: ಋತುಚಕ್ರವು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಆ ಸಮಯದಲ್ಲಿ ವಿಶ್ರಾಂತಿ ಪಡೆಯುವುದು ಮಹಿಳೆಯರ ಸಾಂವಿಧಾನಿಕ ಹಕ್ಕು. ಆ ಅವಧಿಯಲ್ಲಿ ಅವರ ಮೇಲೆ ಶಿಸ್ತು ಕ್ರಮ ಅಥವಾ ನೋಟಿಸ್ ಜಾರಿ ಮಾಡುವುದು ಮಾನಸಿಕ ಕಿರುಕುಳಕ್ಕೆ ಸಮಾನ.
ಸರ್ಕಾರಕ್ಕೆ ನಿರ್ದೇಶನ: ಎಲ್ಲಾ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸಂಸ್ಥೆಗಳು ಈ ನಿಯಮವನ್ನು ಪಾಲಿಸುವಂತೆ ನೋಡಿಕೊಳ್ಳಲು ಸರ್ಕಾರಕ್ಕೆ ಸೂಚಿಸಲಾಗಿದೆ.
ಸಂವೇದನಾಶೀಲತೆ: ಉದ್ಯೋಗದಾತರು ಮಹಿಳಾ ಉದ್ಯೋಗಿಗಳ ಆರೋಗ್ಯದ ಬಗ್ಗೆ ಸಂವೇದನಾಶೀಲರಾಗಿರಬೇಕು. ರಜೆಯ ಅವಧಿಯನ್ನು ಅವರ ಕೆಲಸದ ದಕ್ಷತೆಗೆ ಅಳತೆಗೋಲು ಮಾಡಬಾರದು.







