ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ.
ಹಾಗಾಗಿ ಮೆರವಣಿಗೆ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಯಿತು. ಲಾಠಿ ಹಿಡಿದು ಯುವಕರನ್ನ ಚದುರಿಸಿದ ಪೊಲೀಸರು. ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ನಾಳೆ ಮಧ್ಯಾಹ್ನ 12 ವರೆಗೆ ಪಟ್ಟಣದಾದ್ಯಂತ ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಹೊರಡಿಸಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅದೇಶಿಸಿದ್ದಾರೆ.
ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಮುಸ್ಲಿಂ ರ ಹಸಿರು ಭಾವುಟ ಕಿತ್ತು ಹಿಂದೂಗಳ ಕೇಸರಿ ಭಾವುಟ ಹಾರಿಸಿದ್ದಾರೆ. ಮದ್ದೂರಿನ ಹೂವಿನ ಸರ್ಕಲ್ ಬಳಿ ನಡೆದ ಘಟನೆ ನಡೆದಿದೆ. ಹೂವಿನ ವೃತ್ತದಲ್ಲಿ ಮುಸ್ಲಿರ ಭಾವುಟ ಹಾರಾಡುತ್ತಿತ್ತು. ಭಾವುಟ ಕಿತ್ತು ಹಿಂದೂ ಕಾರ್ಯಕರ್ತರ ಆಕ್ರೋಶ ಹೊರಹಕಿದ್ದಾರೆ. ಸ್ಥಳದಲ್ಲಿ ಮೊಳಗಿದ ಜೈ ಶ್ರೀರಾಮ್ ಘೋಷಣೆ.