ಮೈಸೂರು : ಜಮೀನಿಗೆ ಆನೆ ಬಂದಿದೆ ಎಂದು ಮಾಲೀಕನೊಬ್ಬನಿಂದ ಫೈರಿಂಗ್ ಮಾಡೋದಕ್ಕೆ ಹೋಗಿ ದಸರಾ ಆನೆ ಬಲರಾಮನಿಗೆ ಗಂಭೀರ ಗಾಯ ಸಂಭವಿಸಿದೆ, ಆತನನ್ನು ಪೊಲೀಸರು ಬಂಧಿಸಿದ್ದಾರೆ
WATCH VIDEO: ಮದುವೆ ಮನೆಯಲ್ಲಿ ಸೂತಕದ ಛಾಯೆ, ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು : ವಿಡಿಯೋ ವೈರಲ್
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು.
WATCH VIDEO: ಮದುವೆ ಮನೆಯಲ್ಲಿ ಸೂತಕದ ಛಾಯೆ, ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು : ವಿಡಿಯೋ ವೈರಲ್
ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬಾತ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು.ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ.
WATCH VIDEO: ಮದುವೆ ಮನೆಯಲ್ಲಿ ಸೂತಕದ ಛಾಯೆ, ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು : ವಿಡಿಯೋ ವೈರಲ್
ಸದ್ಯಕ್ಕೆ ದಸರಾ ಆನೆ ಬಲರಾಮ ಚೇತರಿಸಿಕೊಂಡಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿ ಜಮೀನು ಮಾಲೀಕನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಬಂದೂಕು, ಕಾರ್ಟ್ರಿಜ್ನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
WATCH VIDEO: ಮದುವೆ ಮನೆಯಲ್ಲಿ ಸೂತಕದ ಛಾಯೆ, ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು : ವಿಡಿಯೋ ವೈರಲ್