ಬೆಂಗಳೂರು: ಮಂಗಳವಾರ ನಿಧರಾದ ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜನಗರ ಪೇಟೆಯಲ್ಲಿಯರುವ ಹಿಂದೂ ರುದ್ರಭೂಮಿಯರಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ನೇರವೇರಿಸಲಾಗಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಕುಟುಂಬಸ್ಥರು ಅಸ್ತಿ ವಿಸರ್ಜನೆ ಕಾರ್ಯ ನೆರವೇರಿಸಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ರುದ್ರಭೂಮಿಯಲ್ಲಿ ಕುಟುಂಬಸ್ಥರು ವಿಶೇಷ ಪೂಜೆ ಮಾಡಲಿದ್ದು, ಬಳಿಕ ಅಸ್ತಿಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿ ಬೆಳಗ್ಗೆ 9 ಗಂಟೆಗೆ ಅಸ್ತಿ ವಿಸರ್ಜನೆ ಮಾಡಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ದ್ವಾರಕೀಶ್ ಆಗಸ್ಟ್ 19, 1942ರಂದು ಹುಣಸೂರು ನಲ್ಲಿ ಶಾಮರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಅವರು ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿAಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.1963ರಲ್ಲಿ. ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. 16 ಏಪ್ರಿಲ್ 2024ರಂದು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.