ಬೆಂಗಳೂರು : ಹಿರಿಯ ನಟ ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್ ಅವರು ನಿಧನರಾಗಿದ್ದು ಇಂದು ಮಧ್ಯಾಹ್ನದ ನಂತ್ರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ರು.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ಸರ್ಕಾರಿ ಗೌರವದೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಇಂದು ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯ ನೆರವೇರಲಿದೆ ಎಂದು ಪುತ್ರ ಯೋಗೇಶ್ ದ್ವಾರಕೀಶ್ ಹೇಳಿಕೇ ನೀಡಿದ್ದಾರೆ.ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 7:30 ರಿಂದ ಬೆಳಗ್ಗೆ 11:30 ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಿತ್ರರಂಗದ ಗಣ್ಯರು ಅಭಿಮಾನಿಗಳು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗೇಶ್ ದ್ವಾರಕೀಶ್ ತಿಳಿಸಿದರು.