ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಟಾಟಾ ಸನ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ಗೃಹ ಇಲಾಖೆಯನ್ನು ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಅವರಿಗೆ ವಿವರವಾದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಫಡ್ನವಿಸ್, “ಪಾಲ್ಘರ್ ಬಳಿ ನಡೆದ ದುರದೃಷ್ಟಕರ ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಶ್ರೀ ಸೈರಸ್ ಮಿಸ್ತ್ರಿ ಅವರ ನಿಧನದ ಸುದ್ದಿ ತಿಳಿದು ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ನನ್ನ ತೀವ್ರ ಸಂತಾಪಗಳು. ಓಂ ಶಾಂತಿ. ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ವಿವರವಾದ ತನಿಖೆಗಾಗಿ ಸೂಚನೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿರುಪಾಲ್ಘರ್ ಎಸ್ಪಿ ಬಾಳಾಸಾಹೇಬ್ ಪಾಟೀಲ್ ಘಟನೆಯಲ್ಲಿ ಚಾಲಕನು ಕಾರಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಆಸ್ಪತ್ರೆಯಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.
“ಮಿಸ್ತ್ರಿ ಇಂದು ಅಹಮದಾಬಾದ್ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ 3:15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸೂರ್ಯ ನದಿಯ ಮೇಲಿನ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದ ಅಂತ ಹೇಳಿದ್ದಾರೆ. ಡಿಕ್ಕಿಯ ಪರಿಣಾಮ ತೀವ್ರವಾಗಿತ್ತು ಮತ್ತು ವಾಹನದಲ್ಲಿದ್ದ ಏರ್ಬ್ಯಾಗ್ಗಳು ಹೊರಬಂದವು ಆದರೆ ಇಬ್ಬರ ಜೀವಗಳನ್ನು ಉಳಿಸಲು ವಿಫಲವಾದವು ಎನ್ನಲಾಗಿದೆ.