ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ
ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.
ಜ.19ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ, 21ರಂದು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ- ಡಿ.ಕೆ ಶಿವಕುಮಾರ್
BREAKING: ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ‘ಕೆ.ಜೆ. ಜಾಯ್’ ಇನ್ನಿಲ್ಲ | K J Joy No More