ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ನನಗೆ ದೊಡ್ಡ ಮಟ್ಟದಲ್ಲಿ ಆಫರ್ ಕೊಟ್ಟಿದ್ದರು ಎಂಬುದಾಗಿ ವಕೀಲ ದೇವರಾಜೇಗೌಡ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ನನಗೆ ದೊಡ್ಡ ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು ಎಂಬುದಾಗಿ ಗಂಭೀರ ಆರೋಪ ಮಾಡಿದರು. ಅದಲ್ಲೇ ಮೊದಲು ನನ್ನನ್ನ ಯಾರು ಭೇಟಿ ಮಾಡಿದರು ಅನ್ನೋದನ್ನ ಅದರ ಅಡಿಯೋವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗ ಎಲ್.ಆರ್. ಶಿವರಾಮೇಗೌಡ ಮೂಲಕ ನನಗೆ ಆಫರ್ ನೀಡಿದ್ರು. ನಾನು ಎಲ್ ಆರ್ ಶಿವರಾಮೇಗೌಡ ಮಾತನಾಡಿರೋ ಆಡಿಯೋ ಕೂಡ ರಿಲೀಸ್ ಮಾಡ್ತಿದ್ದೇನೆ. ನೀವು ಕೇಳಿ ಎಂಬುದಾಗಿ ಹೇಳಿದರು. ಅಲ್ಲದೇ ನನಗೆ ಎಸ್ಐಟಿ ತನಿಖೆಯ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನಂಬಿಕೆ ಇಲ್ಲ. ಹೀಗಾಗಿ ನಾನು ತನಿಖೆಯನ್ನು ನಡೆಸುವಂತೆ ಸಿಬಿಐಗೆ ದೂರು ಕೊಡೋದಾಗಿ ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ
Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ