ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬ್ರಾಂಡ್ ಬೆಂಗಳೂರು ಅದು ಇದು ಅಂತಿದ್ದಾರೆ. ಆದ್ರೇ ಒಂದು ವರ್ಷದಿಂದ ಅನುದಾನವೇ ಅಭಿವೃದ್ಧಿಗೆ ಬಿಡುಗಡೆಯಾಗಿಲ್ಲ. ಬೆಂಗಳೂರು ಅಭಿವೃದ್ಧಿಯನ್ನೇ ಡಿಸಿಎಂ ಡಿಕೆಶಿ ಕಡೆಗಣಿಸಿದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು.
ರಾಜ್ಯದ ಶೇ 60ರಿಂದ 65 ತೆರಿಗೆ ಬೆಂಗಳೂರಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು.
ಮಳೆಯ ಟ್ರೈಲರ್ ಇದು. ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಮುಖ್ಯಮಂತ್ರಿಯವರು ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರು. ಸಿಎಂ ಹೇಳಿದ್ದಾರೆಂದು ಒಂದಾದರೂ ಮರ ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ: ಮಾಜಿ ಸಿಎಂ ಡಿ.ವಿ ಸದಾನಂದಗೌಡ
ಬಾಗಲಕೋಟೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ : ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ